ಅ.28 ರಿಂದ ನ.6 ತನಕ ಹಾಸನಾಂಬ ದೇವಸ್ಥಾನ ಓಪನ್ : ಸಾರ್ವಜನಿಕರಿಗೆ ದರ್ಶನ ಭಾಗ್ಯವಿಲ್ಲ

Team Newsnap
1 Min Read

ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಈ ಬಾರಿಯೂ ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನದ ಹಾಸನಾಂಬ ದೇವರ ನೇರ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಇಲ್ಲ

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಈ ಸಂಬಂಧ ಹಾಸನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಕೊರೊನಾ ಹಾವಳಿ ಇನ್ನೂ ಕಡಿಮೆಯಾಗಿಲ್ಲ. ಅಲ್ಲದೇ ಸರ್ಕಾರದ ಮಾರ್ಗಸೂಚಿಯಂತೆ ದಸರಾ ಮಹೋತ್ಸವ ಕೂಡ ಸರಳವಾಗಿ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಾಸನಾಂಬೆ ಜಾತ್ರೆಯನ್ನು ಸಹ ಎಲ್ಲಾ ಧಾರ್ಮಿಕ ವಿಧಿ ವಿಧಾನದೊಂದಿಗೆ ಸರಳವಾಗಿ ಆಚರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ಅಕ್ಟೋಬರ್ 28 ದೇವಸ್ಥಾನದ ಬಾಗಿಲು ತೆರೆಯಲಾಗುತ್ತೆ. ಬಾಗಿಲು ತೆರೆದ ಮೊದಲ ದಿನ ಮಾತ್ರ ವಿವಿಐಪಿಗಳಿಗೆ ದರ್ಶನ ಅವಕಾಶ ಕಲ್ಪಿಸಲಾಗಿದೆ. ಅಕ್ಟೋಬರ್ 28 ರಿಂದ ನವೆಂಬರ್ 06 ರವರೆಗೆ 10 ದಿನ ಹಾಸನಾಂಬ ದೇವಿಯ ಪೂಜೆ ವಿಧಿ-ವಿಧಾನಗಳನ್ನು ಆನ್ ಲೈನ್ ಮೂಲಕ ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಹಾಸನಾಂಬ ದರ್ಶನ ಅರಂಭದ ದಿನ ಸಿಎಂ ಬಸವರಾಜ ಬೊಮ್ಮಾಯಿ, ಶ್ರೀ ಆದಿಚುಂಚನಗಿರಿ ಮಠದ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಅವರನ್ನು ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು.

ಹಾಸನದಲ್ಲಿ ಇನ್ನೂ ಕೊರೊನಾ ಪಾಸಿಟಿವಿಟಿ ಕಡಿಮೆಯಾಗಿಲ್ಲದ ಕಾರಣ ಸಾರ್ವಜನಿಕವಾಗಿ ಹಾಸನಾಂಬ ದರ್ಶನ ಇರುವುದಿಲ್ಲ. ಇದಕ್ಕೆ ಸಾರ್ವಜನಿಕರು ಹಾಗೂ ಭಕ್ತಾದಿಗಳು ಸಹಕರಿಸಬೇಕು ಎಂದು ಸಚಿವರು ಮನವಿ ಮಾಡಿದರು.

Share This Article
Leave a comment