ಹಾಸನದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆಗೆ ಹೆಚ್‌ಡಿಕೆ ಮಾಸ್ಟರ್ ಪ್ಲಾನ್

Team Newsnap
1 Min Read

ಕ್ಷೇತ್ರದ ಜೆಡಿಎಸ್ ಟಿಕೆಟ್ ಗೊಂದಲಕ್ಕೆ ತೆರೆ ಎಳೆಯಲು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಹಾಸನ ವಿಧಾನಸಭಾ ಕ್ಷೇತ್ರದ ಪ್ರಮುಖ ಕಾರ್ಯಕರ್ತರು, ಮುಖಂಡರು, ಮಾಜಿ ಜಿ.ಪಂ. ಸದಸ್ಯರು, ತಾ.ಪಂ. ಮಾಜಿ ಸದಸ್ಯರು, ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪ್ರಮುಖರ ಸಭೆ ಕರೆದಿದ್ದಾರೆ.
ಸುಮಾರು 300 ಜನರು ಪಾಲ್ಗೊಳ್ಳಲಿದ್ದಾರೆ.ಕಾರವಾರ : ಆಸ್ತಿ ವಿವಾದ ಒಂದೇ ಕುಟುಂಬದ ನಾಲ್ವರ ಹತ್ಯೆ

ಚಿಕ್ಕಮಗಳೂರಿನಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆ ಬಳಿಕ ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದು, ಸಭೆಯಲ್ಲಿ ಅಭ್ಯರ್ಥಿ ಯಾರಾದರೆ ಗೆಲುವು ಸುಲಭವಾಗಲಿದೆ ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹಿಸಲಿದ್ದಾರೆ.

ಹಾಸನ ಟಿಕೆಟ್ ಬಗ್ಗೆ ತೀರ್ಮಾನ ಮಾಡಲು ತಂತ್ರಗಾರಿಕೆ ರೂಪಿಸಿದ್ದಾರೆ. ಇನ್ನೊಂದೆಡೆ ಹಾಸನ ಕ್ಷೇತ್ರದ ಬಗ್ಗೆ ಗೌಪ್ಯ ಸರ್ವೆ ಮಾಡಿಸಿ ವರದಿ ತರಿಸಿಕೊಂಡಿರುವ ಕುಮಾರಸ್ವಾಮಿ, ಗೌಪ್ಯ ವರದಿ, ಪ್ರಮುಖರ ಅಭಿಪ್ರಾಯ ಎರಡನ್ನೂ ಆಧರಿಸಿ ಟಿಕೆಟ್ ಘೋಷಣೆ ಮಾಡಲಿದ್ದಾರೆ.

ಇದುವರೆಗೆ ಭವಾನಿಗೆ ಟಿಕೆಟ್ ಬೇಡ ಎಂದು ಹೆಚ್‌ಡಿಕೆ ಪ್ರತಿಪಾದಿಸುತ್ತಿದ್ದು, ಅವರ ವಿರೋಧದ ನಡುವೆ ಕೂಡಾ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಭವಾನಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇನ್ನೊಂದೆಡೆ ತಾವೇ ಆಕಾಂಕ್ಷಿ ಎಂದು ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸ್ವರೂಪ್ ಒಂದು ಸುತ್ತಿನ ಪ್ರಚಾರ ಮುಗಿಸಿದ್ದಾರೆ.

ಸ್ವರೂಪ್ ಬೆನ್ನಿಗೆ ಮಾಜಿ ಕುಮಾರಸ್ವಾಮಿ ನಿಂತಿದ್ದು, ಭಾನುವಾರದ ಸಭೆ ತೀವ್ರ ಕುತೂಹಲ ಮೂಡಿಸಿದೆ. ಸಭೆ ಬಳಿಕ ಹಾಸನ ಕದನ ಕಲಿ ಯಾರಾಗುತ್ತಾರೆ ಎನ್ನುವ ಗೊಂದಲಕ್ಕೆ ತೆರೆ ಬೀಳುವ ಸಾಧ್ಯತೆಯಿದೆ.

Share This Article
Leave a comment