ಭಾರಿ ಚರ್ಚೆಗೆ ಗ್ರಾಸವಾಗಿದ್ದ ಹತ್ರಾಸ್ ಅತ್ಯಾಚಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ. ಹತ್ರಾಸ್ ಅತ್ಯಾಚಾರ ಪ್ರಕರಣದ ಕುರಿತು ದೇಶಾದ್ಯಂತ ಭಾರಿ ಕೂಗು ಎದ್ದ ಬೆನ್ನಲ್ಲೇ ಉತ್ತರ ಪ್ರದೇಶ ಈ ನಿರ್ಧಾರ ಕೈಗೊಂಡಿದೆ.
ಎರಡು ವಾರಗಳ ಹಿಂದೆ 19 ವರ್ಷದ ಯುವತಿಯನ್ನು ನಾಲ್ವರು ಆರೋಪಿಗಳು ಅತ್ಯಾಚಾರ ಎಸಗಿ ಚಿತ್ರಹಿಂಸೆ ನೀಡಿದ್ದರು. ತೀವ್ರ ಗಾಯಗೊಂಡಿದ್ದ ಆಕೆಯನ್ನು ಹೊಸದಿಲ್ಲಿಯಲ್ಲಿ ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಆಕೆ ಸೆ.29ರಂದು ಮೃತಪಟ್ಟಳು, ತ್ವರಿತವಾಗಿ ಅಂತ್ಯಕ್ರಿಯೆ ನಡೆಸಿದ್ದು ಭಾರಿ ಚರ್ಚೆಗೆ ಗ್ರಾಸವಾಗಿತ್ತು.
ಹೊಸದಿಲ್ಲಿಯ ನಿರ್ಭಯಾ ಪ್ರಕರಣದಂತೆ ಇದು ಅತ್ಯಂತ ಅಮಾನವೀಯ, ಭೀಕರ ಕೃತ್ಯ ಎಂದು ಇಡೀ ದೇಶಾದ್ಯಂತ ದನಿ ಎದ್ದಿತ್ತು. ಈಗ ಜನಾಕ್ರೋಶಕ್ಕೆ ಮಣಿದಿರುವ ಉತ್ತರ ಪ್ರದೇಶ ಸರಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಆದೇಶಿಸಲಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ