ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಪುಟ್ಟರಾಜು ನಮ್ಮ ದೇಶದಲ್ಲಿ ಒಂದೇ ಅವಧಿಯಲ್ಲಿ ಒಬ್ಬ ಎರಡು ಅಸೆಂಬ್ಲಿ, ಎರಡು ಎಂಪಿ ಚುನಾವಣೆ ಮಾಡಿರೋದು ಇದ್ದರೆ ಅದು ನಾನು ಒಬ್ಬನೇ ಎಂದರು.
ನಾನು ಚುನಾವಣೆ ಮಾಡೋದರಲ್ಲಿ ಪಿಹೆಚ್‍ಡಿ ಮಾಡಿಬಿಟ್ಟಿದ್ದೇನೆ. ರಾಜಕಾರಣದಲ್ಲಿ 40 ವರ್ಷ ಅನುಭವ ಇದೆ ಎಂದರು.
ರೈತ ಸಂಘಕ್ಕೆ ಸೋಲಿನ ಭಯ ಇದೆ. ನಾನು ಸೋಲು-ಗೆಲುವು ನೋಡಿರುವವನು, ನನಗೆ ಭಯನೇ ಇಲ್ಲ. ಈ ಚುನಾವಣೆಯಲ್ಲಿ ನಾನು ಮಾಡಿರುವ ಅಭಿವೃದ್ಧಿ ಕೆಲಸಕ್ಕೆ ಅತ್ಯಂತ ಬಹುಮತದಲ್ಲಿ ನನ್ನನ್ನು ಗೆಲುವು ತಂದುಕೊಡುತ್ತೆ.
ಈಗಾಗಲೇ ತೀರ್ಮಾನವಾಗಿ ಬೂತ್ ನಲ್ಲಿದೆ ಎಂದು ಹೇಳಿದರು. ನನಗೆ ಸೋಲಿನ ಹತಾಶೆನೇ ಇಲ್ಲ. ಒಂದು ಅವಧಿಯಲ್ಲಿ ಎರಡು ಸಲ ಸೋತಿದ್ದೀನಿ, ಎರಡು ಸಲ ಗೆದ್ದಿದ್ದೀನಿ. ಈ ದೇಶದಲ್ಲಿ ಯಾವನಾರು ಒಬ್ಬ ಎರಡು ಅಸೆಂಬ್ಲಿ ಚುನಾವಣೆ, ಎರಡು ಎಂಪಿ ಚುನಾವಣೆ ಮಾಡಿರೋ ಗಂಡು ಯಾರಾದ್ರು ಇದ್ರೆ ಪುಟ್ಟರಾಜು ಒಬ್ಬನೇ. ಅದರ ಭಯನೇ ಇಲ್ಲ.ಮತ್ತೆ ಉದ್ಧವ್ ಠಾಕ್ರೆ ಸರ್ಕಾರ ಮರು ಸ್ಥಾಪನೆ ಸಾಧ್ಯವಿಲ್ಲ – ಸುಪ್ರಿಂ : ಶಿಂಧೆ ಬಣಕ್ಕೆ ರಿಲೀಫ್
ನೂರಕ್ಕೆ ನೂರರಷ್ಟು ಈ ಬಾರಿ ಗೆಲ್ತೇನೆ. ಕನಿಷ್ಟ 25 ಸಾವಿರ ಲೀಡ್ ನಲ್ಲಿ ಗೆಲ್ಲುವೆ ಎಂದು ಆತ್ಮ ವಿಶ್ವಾಸದಿಂದ ಹೇಳಿದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು