December 23, 2024

Newsnap Kannada

The World at your finger tips!

musqito

ರಾಜ್ಯದಲ್ಲಿ ‘ಡೇಂಘಿ’ ಜ್ವರಕ್ಕೆ ಹಾವೇರಿಯಲ್ಲಿ ಮೊದಲ ಬಲಿ

Spread the love

ಹಾವೇರಿ : ಡೇಂಘಿ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದ್ದು ಇದೀಗ ಹಾವೇರಿ ಜಿಲ್ಲೆಯಲ್ಲಿ ಮೊದಲ ಬಲಿಯಾಗಿದೆ .

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ನರೇಗಲ್ ಗ್ರಾಮದ 30 ವರ್ಷದದ ಗೌಸಿಯ ಎಂಬ ಮಹಿಳೆ ಡೇಂಘಿಗೆ ಬಲಿಯಾಗಿದ್ದಾರೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಗೌಸಿಯ ಅವರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದು ,ಚಿಕಿತ್ಸೆ ಫಲಿತದೆ ಗೌಸಿಯ ಸಾವನ್ನಪ್ಪಿದ್ದಾರೆ.

ಕುಟುಂಬಸ್ಥರು , ವೈದ್ಯರ ನಿರ್ಲಕ್ಷದಿಂದ ಗೌಸಿಯ ಸಾವನ್ನಪ್ಪಿದ್ದಾರೆ ಎಂದು ವೈದ್ಯರ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ.24 ವರ್ಷದ ಯುವತಿ ಹೃದಯಾಘಾತದಿಂದ ಸಾವು

ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡೇಂಘಿ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದಂತೆಆರೋಗ್ಯ ಇಲಾಖೆಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಡೇಂಘಿ ರೋಗ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಯಾವೆಲ್ಲಾ ಕ್ರಮ ಕೈಗೊಳ್ಳಬೇಕು ಎಂಬುದನ್ನು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!