ಕಳೆದ ಕೆಲ ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ಮಳೆ ಶನಿವಾರ ರಾಜ್ಯದಲ್ಲಿ ಮತ್ತೆ ಜೋರಾಗಿದೆ,ಮಂಡ್ಯ ಸೇರಿದಂತೆ ಕೆಲವೆಡೆ ಮಳೆ ಸುರಿದಿದೆ, ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಭಾರಿ ಮಳೆ .
ಧಾರಾಕಾರ ಮಳೆಯಿಂದ ಬೆಂಗಳೂರಿನ ರಸ್ತೆಗಳೆಲ್ಲಾ ಜಲಾವೃತವಾಗಿ ವಾಹನ ಸವಾರರು ಹಾಗೂ ತಗ್ಗು ಪ್ರದೇಶ ಜನರು ಪರದಾಡುವಂತಾಗಿತ್ತು.
ಬೆಂಗಳೂರಿನ ಜೆ.ಸಿ.ನಗರ, ಮೇಖ್ರಿ ಸರ್ಕಲ್, ಜಯನಗರ, ವಿಜಯ ನಗರ, ರಾಜಾಜಿನಗರ, ಹೆಬ್ಬಾಳ,ಕೆಂಗೇರಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.
ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಗಳು ಕೆರೆಯಂತಾಗಿದ್ದವು. ಶಾಂತಿನಗರ ಡಬಲ್ ರೋಡ್ನಲ್ಲಿ ಹೊಳೆಯಂತೆ ರಸ್ತೆಯಲ್ಲಿ ಮಳೆ ನೀರು ಹರಿದಿದ್ದು, ವಾಹನ ಸವಾರರು ಪರದಾಡುವಂತಾಗಿತ್ತು.
ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ನ 14ನೇ ಕ್ರಾಸ್ನ ಮನೆಗಳಿಗೆ ಮಳೆ ನೀರು ನುಗ್ಗಿದ ಅವಾಂತರವೇ ಸೃಷ್ಟಿಯಾಗಿತ್ತು. ಮನೆಗಳಲ್ಲಿ ಮೊಣಕಾಲುದ್ದ ನೀರು ನಿಂತುಕೊಂಡಿದ್ದರಿಂದ ನಿವಾಸಿಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಮನೆಗಳಿಗೆ ನುಗ್ಗಿದ ನೀರನ್ನು ನಿವಾಸಿಗಳು ರಾತ್ರಿ ಇಡೀ ಹೊರಹಾಕಲು ಹರಸಾಹಸವೇ ಪಟ್ಟಿದ್ದಾರೆ. ಸ್ಥಳೀಯ ನಿವಾಸಿಗಳು ಸರ್ಕಾರ ಮತ್ತು ಬಿಬಿಎಂಪಿಗೆ ಹಿಡಿಶಾಪ ಹಾಕಿದರು
ಮಂಡ್ಯದಲ್ಲೂ ಕೂಡ ರಾತ್ರಿ 8 ಗಂಟೆಗೆ ಗುಡುಗು ಸಹಿತ ಮಳೆ ಆರಂಭವಾಗಿ ರಾತ್ರಿ 11.30 ರ ತನಕ ಎಡಬಿಡದೇ ಸುರಿಯಿತು.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ