ಬೆಂಗಳೂರು: ಸಮಾಜ ಕಲ್ಯಾಣ ಸಚಿವ ಹೆಚ್.ಸಿ. ಮಹದೇವಪ್ಪ, ಹಿಂದೂ ಧರ್ಮದಲ್ಲಿನ ಜಾತೀಯತೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ತಾನು ಬೌದ್ಧ ಧರ್ಮವನ್ನು ಸ್ವೀಕರಿಸುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಧಮ್ಮ ಚಕ್ರ ಪರಿವರ್ತನಾ ದಿನದ ಹಿನ್ನೆಲೆಯಲ್ಲಿ ಶುಭಾಶಯ ತಿಳಿಸಿದ್ದಾರೆ ಸಚಿವ ಮಹದೇವಪ್ಪ. ಅವರು ಹಿಂದೂ ಧರ್ಮದಲ್ಲಿ ಜಾತಿ ಶ್ರೇಷ್ಠತೆಯ ರೋಗವಿದ್ದು, ಯಾವುದೇ ಸುಧಾರಣೆಯ ಲಕ್ಷಣಗಳು ಕಾಣುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
“ನಾನು ಸ್ವಾತಂತ್ರ್ಯ, ಸಮಾನತೆ, ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಸ್ವೀಕರಿಸುತ್ತೇನೆ. ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮದಲ್ಲಿ ಸುಧಾರಣೆ ಕಾಣುವುದಿಲ್ಲ. ವ್ಯಕ್ತಿಯ ಬೆಳವಣಿಗೆಗೆ ಸಮಾನತೆ, ಕರುಣೆ ಮತ್ತು ಸ್ವಾತಂತ್ರ್ಯ ಮುಖ್ಯ, ಆದ್ದರಿಂದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ,” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.ಚನ್ನಪಟ್ಟಣ ಉಪಚುನಾವಣೆ: ‘NDA’ ಅಭ್ಯರ್ಥಿ ನಾನೆಂದ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ
ಹೆಚ್.ಸಿ. ಮಹದೇವಪ್ಪ, ಬೌದ್ಧ ಧರ್ಮವೇ ಸಮಾನತೆ ಮತ್ತು ಶಾಂತಿಯ ಪ್ರತೀಕವಾಗಿದ್ದು, ಮುಂದಿನ ದಿನಗಳಲ್ಲಿ ಇದರ ಪ್ರಚಾರಕ್ಕೆ ತಾವು ಬದ್ಧರಾಗಿರುವುದಾಗಿ ಹೇಳಿದ್ದಾರೆ.
More Stories
ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ಟಿಪ್ಪು ಸುಲ್ತಾನ್ನ ಖಡ್ಗ 3.4 ಕೋಟಿಗೆ ಹರಾಜು