ಸಿಎಂ ಯಡಿಯೂರಪ್ಪ ಅವರಿಗೆ ಹಳೇ ಕಂಟಕ ಮತ್ತೊಂದು ಹೊಸ ರೂಪದಲ್ಲಿ ಸುತ್ತಿಕೊಳ್ಳುವ ಲಕ್ಷಣವಿದೆ.
2013 ರ ಡಿನೋಟಿಫಿಕೇಷನ್ ಪ್ರಕರಣಕ್ಕೆ ಈಗ ಜೀವ ಬಂದಿದೆ. ಈ ಪ್ರಕರಣದಿಂದ ತಮ್ಮನ್ನು ಕೈ ಬಿಡುವಂತೆ ಸಲ್ಲಿಸಿದ್ದ ಅರ್ಜಿ ರಾಜ್ಯ ಹೈಕೋರ್ಟ್ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರು ತಿರಸ್ಕರಿಸಿದ್ದಾರೆ.
ಬೆಂಗಳೂರಿನ ಬೆಳ್ಳಂದೂರು ಬಳಿಯ ಜಮೀನು ಡಿನೋಟೀಫಿಕೇಶ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸುದೇವ ರೆಡ್ಡಿ ಎಂಬುವವರು 2013ರಲ್ಲಿ ಖಾಸಗಿ ದೂರು ನೀಡಿದ್ದರು. ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು.
ಈ ಪ್ರಕರಣ ರದ್ದು ಕೋರಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ತ್ ಏಕ ಸದಸ್ಯ ಪೀಠ, ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದು ಯಡಿಯೂರಪ್ಪ ನವರಿಗೆ ಹಿನ್ನಡೆ ಉಂಟು ಮಾಡಿದೆ.
ಮಾಜಿ ಸಚಿವ ಆರ್.ವಿ.ದೇಶಪಾಂದೆ ವಿರುದ್ದವೂ ಈ ಪ್ರಕರಣ ದಾಖಲಾಗಿತ್ತು. ಆದರೆ ದೇಶಪಾಂಡೆ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಹೀಕೋರ್ಟ್ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ.
ಈ ಹಿನ್ನಡೆಯನ್ನು ಯಡಿಯೂರಪ್ಪ ನವರ ವಿರುದ್ಧ ಅಸ್ತ್ರವಾಗಿ ಅವರ ವಿರೋಧಿಗಳು ಬಳಕೆ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
- ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
- MUDA ಹಗರಣ: ಜೆಡಿಎಸ್ ಶಾಸಕ ಜಿಟಿಡಿ ವಿರುದ್ಧ ಕಿಕ್ಬ್ಯಾಕ್ ಆರೋಪ, ಲೋಕಾಯುಕ್ತದಲ್ಲಿ ದೂರು
- ನಕಲಿ ಸಿಗರೇಟ್ ತಯಾರಿಸಿ ಮಾರಾಟ – ಕೋಟಿ ಮೌಲ್ಯದ ಸಿಗರೇಟ್ ವಶ
- ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
More Stories
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ
ರಾಜ್ಯ ಸರ್ಕಾರದಿಂದ 41 ಪೊಲೀಸ್ ಇನ್ಸ್ಪೆಕ್ಟರ್ಗಳ ದಿಢೀರ್ ವರ್ಗಾವಣೆ
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ