ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್‍ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಇಂದು ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.
ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಬಳಿಕ ಮಾತನಾಡಿದ ಹೆಚ್‍ಡಿಡಿ, ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ.
ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು ಎಂದು ಹೇಳಿದರು.
ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ ಅಲ್ಲ ವಿದ್ಯೆ ಹೃದಯವಂತಿಕೆ ಬೆಳೆಸಬೇಕು. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು.
ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ.ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ ಎಂದರು.
More Stories
ವಿಮಾನ ಪತನ: ಕೊನೆಯ ಕ್ಷಣದಲ್ಲಿ ಲ್ಯಾಂಡಿಂಗ್ ಗೇರ್ ವೈಫಲ್ಯ; 179 ಮಂದಿ ದುರ್ಮರಣ!
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು