Main News

ಹೆಚ್​ಡಿ ದೇವೇಗೌಡರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ಬೆಂಗಳೂರು ವಿವಿ

ಮಾಜಿ ಪ್ರಧಾನಿ, ಜೆಡಿಎಸ್​ ವರಿಷ್ಠ ಹೆಚ್‍ಡಿ ದೇವೇಗೌಡ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ. ಇಂದು ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಶ್ವವಿದ್ಯಾಲಯದ 58ನೇ ವಾರ್ಷಿಕ ಘಟಿಕೋತ್ಸವದಲ್ಲಿ ದೇವೇಗೌಡ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗಿದೆ.

ಗೌರವ ಡಾಕ್ಟರೇಟ್ ಪ್ರದಾನ ಸ್ವೀಕರಿಸಿದ ಬಳಿಕ ಮಾತನಾಡಿದ ಹೆಚ್‍ಡಿಡಿ, ಬೆಂಗಳೂರು ವಿವಿ ಲಕ್ಷಾಂತರ ವಿದ್ಯಾರ್ಥಿಗಳ ಜ್ಞಾನ ಭಂಡಾರ. ಉನ್ನತ ಶಿಕ್ಷಣದಲ್ಲಿ ಉತೃಷ್ಕೃತೆಯನ್ನು ಸಾಧಿಸಿದೆ.

ಈ ವಿವಿ ಬಗ್ಗೆ ನನಗೆ ಅಪಾರ ಗೌರವ ಇದೆ. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು ಎಂದು ಹೇಳಿದರು.

ಶಿಕ್ಷಣ ಪುಸ್ತಕ ಜ್ಞಾನ, ಅಕ್ಷರ ಜ್ಞಾನ ಮಾತ್ರ ಅಲ್ಲ ವಿದ್ಯೆ ಹೃದಯವಂತಿಕೆ ಬೆಳೆಸಬೇಕು. ವಿದ್ಯೆ ಕಾಗದದ ಸರ್ಟಿಫಿಕೇಟ್ ಆಗಬಾರದು. ವಿದ್ಯೆ ಸಂಸ್ಕಾರವನ್ನು ಒಳಗೊಂಡಿರಬೇಕು. ವಿದ್ಯಾರ್ಥಿ ಜೀವನ ತಪ್ಪಸ್ಸು ಇದ್ದಂತೆ. ವಿದ್ಯೆ ಒಬ್ಬನ ಜೀವನ ಕಟ್ಟಿಕೊಳ್ಳವುದು ಮಾತ್ರವಲ್ಲ, ದೇಶವನ್ನು ಸಮಾಜವನ್ನು ಕಟ್ಟುತ್ತದೆ. ಪ್ರಸ್ತುತ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣದ ಅಗತ್ಯ ಹೆಚ್ಚಿದೆ ಎಂದು ತಿಳಿಸಿದರು.

ಸೋಮನಾಥ್ ಅವರಿಗೆ ಗೌರವ ಡಾಕ್ಟರೇಟ್ ಸಂದಿರುವುದು ಸಂತಸ ತಂದಿದೆ. ಇಸ್ರೋ ಅಧ್ಯಕ್ಷ ಸೋಮನಾಥ್ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ.ಇಸ್ರೋದ ಸಂಸ್ಥೆ ಇಂದು ಬಾಹ್ಯಕಾಶ ಕ್ಷೇತ್ರ ಭೂಪಟದಲ್ಲಿ ವಿಶ್ವಕ್ಕೆ ಪರಿಚಯ ಮಾಡಿ ಗೌರವ ತಂದಿದೆ ಎಂದರು.

Team Newsnap
Leave a Comment

Recent Posts

Job Alert : ಕೇಂದ್ರ ಸರ್ಕಾರದಿಂದ 17,727 ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ SSC CGL ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು , ಆಸಕ್ತ… Read More

June 26, 2024

ಮನೆಯ ಗೋಡೆ ಕುಸಿದು ನಾಲ್ವರ ದುರ್ಮರಣ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಮನೆಯ ಗೋಡೆ ಕುಸಿದು ಬಿದ್ದು ನಾಲ್ವರು‌… Read More

June 26, 2024

ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ : ಸಿಎಂ

ಬೆಂಗಳೂರು : 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್‌ ಆಗಿದ್ದು, ಡಿಸೆಂಬರ್‌ 20 ರಿಂದ ಮೂರು… Read More

June 25, 2024

ವಿಷಯುಕ್ತ ಮದ್ಯ ಸೇವಿಸಿ 58 ಮಂದಿ ದುರ್ಮರಣ

ಚೆನ್ನೈ : ವಿಷಯುಕ್ತ ಮದ್ಯ ಕುಡಿದು ತಮಿಳು ನಾಡಿನಲ್ಲಿ 58 ಮಂದಿ ಮೃತಪಟ್ಟಿದ್ದಾರೆ. ಆರೋಗ್ಯ ಸಚಿವ ಮಾ ಸುಬ್ರಹ್ಮಣಿಯನ್, ದುರಂತದಲ್ಲಿ… Read More

June 25, 2024

ರಾಜ್ಯ ಸರ್ಕಾರದಿಂದ ಪ್ರತಿ ಲೀಟರ್ ‘ಹಾಲಿಗೆ’ 2.10 ರೂ ಹೆಚ್ಚಳ

ಬೆಂಗಳೂರು: ಪೆಟ್ರೋಲ್‌, ಡಿಸೇಲ್‌ ಮೇಲಿನ ಸೆಸ್‌ ದರವನ್ನು ಹೆಚ್ಚಿದ ರಾಜ್ಯ ಸರ್ಕಾರ ಇದೀಗ ಹಾಲಿನ ದರವನ್ನು ಹೆಚ್ಚಿಸಿ ಆದೇಶವನ್ನು ಹೊರಡಿಸಿದೆ.… Read More

June 25, 2024

ನಿವೃತ್ತ ಸಿಜಿಎಂ ಎ.ಕೆ.ಸಿಂಗ್ ‘ಬಂಧನ್ ಬ್ಯಾಂಕ್’ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಕ

ಇಂದು ರಿಸರ್ವ್ ಬ್ಯಾಂಕ್ , ಎ.ಕೆ.ಸಿಂಗ್ ಅವರನ್ನು ಬಂಧನ್ ಬ್ಯಾಂಕಿನ ಮಂಡಳಿಯ ಹೆಚ್ಚುವರಿ ನಿರ್ದೇಶಕರಾಗಿ ನೇಮಿಸಿದೆ. ಆರ್‌ಬಿಐನ ಮುಖ್ಯ ಜನರಲ್… Read More

June 25, 2024