New Delhi

ಸಂಸತ್‌ ನಲ್ಲಿ ಕೈಜೋಡಿಸಿ , ಮೇಕೆದಾಟು ಯೋಜನೆಗೆ ಒಪ್ಪಿಗೆ ಕೊಡಿ ಎಂದು ಮನವಿ ಮಾಡಿದ ಹೆಚ್‌ ಡಿ ದೇವೇಗೌಡ

ನವದೆಹಲಿ : ರಾಜ್ಯಸಭೆಯಲ್ಲಿ ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭೆ ಸದಸ್ಯರಾದ ಹೆಚ್‌ ಡಿ ದೇವೇಗೌಡರು ಕರ್ನಾಟಕದಲ್ಲಿ ಆಗುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಧ್ವನಿ ಎತ್ತಿದ್ದಾರೆ.

ದೇವೇಗೌಡರು ಮೇಕೆದಾಟು ಯೋಜನೆಯ ವಿಷಯವನ್ನು ಪ್ರಸ್ತಾಪ ಮಾಡಿ , ರಾಜ್ಯದ ಕುಡಿಯುವ ನೀರಿನ ಸಮಸ್ಯೆಯನ್ನು ಬೆಳಕಿಗೆ ತಂದಿದ್ದಾರೆ.

ಮಂಗಳವಾರ ರಾಜ್ಯಸಭೆಯಲ್ಲಿ ಮಾತನಾಡಿದ ದೇವೇಗೌಡರು , ಕೇಂದ್ರ ಸರಕಾರವು 30 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬೇಕು ಸಂಸತ್‌ ನಲ್ಲಿ ಕೈ ಮುಗಿದು ಮನವಿ ಮಾಡಿದ್ದಾರೆ.

ತಮಿಳುನಾಡಿನ ಪರ ಸುಪ್ರೀಂ ಕೋರ್ಟ್ʼನಲ್ಲಿ ಸುಪ್ರೀಂ ಕೋರ್ಟ್ʼನಲ್ಲಿ ವಾದ ಮಂಡಿಸಿದ ಹಿರಿಯ ವಕೀಲರೇ ಮೆಟ್ಟೂರು ಜಲಾಶಯಕ್ಕೆ ಮೇಲ್ಭಾಗದಲ್ಲಿ ಕರ್ನಾಟಕ ಜಲಾಶಯ ನಿರ್ಮಾಣ ಮಾಡಬಹುದು ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಮಾನ್ಯ ಪ್ರಧಾನಿಗಳು ದಯಮಾಡಿ ಮಧ್ಯಪ್ರವೇಶ ಮಾಡಬೇಕು, ಕರ್ನಾಟಕದ ಕುಡಿಯುವ ನೀರಿನ ಸಂಕಷ್ಟವನ್ನು ಪರಿಹಾರ ಮಾಡಬೇಕು. ಎಲ್ಲರಿಗೂ ಇದು ನನ್ನ ಪ್ರಾರ್ಥನೆ ಎಂದು ಕೈ ಜೋಡಿಸಿ ಮನವಿ ಮಾಡಿಕೊಂಡರು.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಕರ್ನಾಟಕವೂ ಸೇರಿದಂತೆ ಮಾಲಿನ್ಯ ನಿಯಂತ್ರಣದ ಹೆಸರಿನಲ್ಲಿ ಎಲ್ಲೆಡೆ ನಡೆಯುತ್ತಿರುವ ಭ್ರಷ್ಟಾಚಾರದ ಬಗ್ಗೆ ನನಗೆ ಅರಿವಿದೆ. ಮುಖ್ಯಮಂತ್ರಿ ಆಗಿದ್ದ ನನಗೆ ,ಮಾಲಿನ್ಯ ನಿಯಂತ್ರಣ ಮಂಡಳಿಯನ್ನು ತಮ್ಮ ಸ್ವಾರ್ಥ ಮತ್ತು ಸ್ವಹಿತಕ್ಕಾಗಿ ಹೇಗೆ ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದರ ಬಗ್ಗೆ ಚನ್ನಾಗಿ ಗೊತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ್ರು ಹೇಳಿದರು.

Team Newsnap
Leave a Comment

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024