ಜೆಡಿಎಸ್‌ ವಿಸರ್ಜನೆ ಪ್ರಶ್ನೆಗೆ ಎಚ್‌ಡಿಕೆ ಕಡಕ್ ಉತ್ತರ

Team Newsnap
1 Min Read

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರದೇ ಇದ್ದಲ್ಲಿ ಜೆಡಿಎಸ್‌ ಅನ್ನು ವಿಸರ್ಜಿಸುವುದಾಗಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದರು.

ಇದರ ಹಿನ್ನಲೆ ಕಾಂಗ್ರೆಸ್‌ನ ನಾಯಕರು ಯಾವಾಗ ಪಕ್ಷ ವಿಸರ್ಜನೆ ಎಂದು ಟೇಕಿಸುತಿದ್ದಾರೆ.

ಸರಣಿ ಟ್ವೀಟ್‌ ಮೂಲಕ ಎಚ್‌ಡಿಕೆ , ಜೆಡಿಎಸ್‌ ವಿಸರ್ಜಿಸುವ ಪ್ರಶ್ನೆಯೇ ಇಲ್ಲ ಎಂದು ಉತ್ತರ ನೀಡಿದ್ದಾರೆ.

ಜೆಡಿಎಸ್‌ ಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ,ಹಾಗಾಗಿ ಜೆಡಿಎಸ್‌ ಪಕ್ಷವನ್ನು ವಿಸರ್ಜನೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಕುಮಾರಸ್ವಾಮಿ ಅವರ ಸರಣಿ ಟ್ವೀಟ್‌ನಲ್ಲಿ, ಕೆಲವರ ವಿವೇಕ ರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಎಂದು ಭಾವಿಸಿದ್ದೆ.

123 ಕ್ಷೇತ್ರಗಳನ್ನು ಕೊಟ್ಟರೆ, ನಾನು ಭರವಸೆ ಕೊಟ್ಟಂತೆ ಪಂಚರತ್ನ ಯೋಜನೆಗಳನ್ನು ಜಾರಿ ಮಾಡದಿದ್ದರೆ ಜೆಡಿಎಸ್ ಪಕ್ಷವನ್ನು ವಿಸರ್ಜನೆ ಮಾಡುತ್ತೇನೆ, ಆಮೇಲೆ ಎಂದೂ ವೋಟು ಕೇಳಲು ನಿಮ್ಮ ಮನೆ ಬಾಗಿಲಿಗೆ ಬರುವುದಿಲ್ಲ ಎಂದು ಜನರಿಗೆ ಹೇಳಿದ್ದು ಹೌದು.

ಆದರೆ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ.ಇಂದು ರಾಜಧಾನಿ ಸೇರಿದಂತೆ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಕಾಂಗ್ರೆಸ್‌ನವರು ಗೆದ್ದ ಅಹಂನಲ್ಲಿ ಇದ್ದಾರೆ. ಕಾಯುವ ತಾಳ್ಮೆ ನನಗಿದೆ ಎಂದು ಕಾಂಗ್ರೆಸ್‌ ವಿರುದ್ಧ ಸರಣಿ ಟ್ವೀಟ್‌ನಲ್ಲಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ .

Share This Article
Leave a comment