ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ HDK ಅವರು, ಬೆಲೆ ಏರಿಕೆ ಬರೆ ಎಳೆಯುವಲ್ಲಿ ಬಿಜೆಪಿ ಸರಕಾರದ್ದು ಸಾರ್ವಕಾಲಿಕ ದಾಖಲೆ. ಏಪ್ರಿಲ್ 1ರಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ, ಈಗ ಜುಲೈ 1ರಿಂದ ಮತ್ತೆ ವಿದ್ಯುತ್ ಬರೆ ಎಳೆಯಲು ಸಜ್ಜಾಗಿದೆ ಎಂದಿದ್ದಾರೆ.ಇದನ್ನು ಓದಿ –ನಾನು ಮಂಡ್ಯ ಬಿಡಲ್ಲ :ಮಂಡ್ಯ ಕೂಡ ನನ್ನನ್ನು ಬಿಡಲ್ಲ: M P ಸುಮಲತಾ
ರಾಜ್ಯದಲ್ಲಿ ಉತ್ತಮ ಮಳೆಯಾಗಿ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ವಿದ್ಯುತ್ ಉತ್ಪಾದನೆಯೂ ಚೆನ್ನಾಗಿದೆ. ಹೆಚ್ಚುವರಿ ವಿದ್ಯುತ್ ಇದೆ ಎಂದು ಸರಕಾರವೇ ಹೇಳುತ್ತಿದೆ. ಹೀಗಿದ್ದರೂ ದರ ಏರಿಕೆ ಯಾಕೆ ? ಇದರ ಹಿಂದಿನ ಹುನ್ನಾರ ಏನು? ಎಂದು ಪ್ರಶ್ನಿಸಿದ್ದಾರೆ.
ಮಾಸಿಕ 100 ಯೂನಿಟ್ ಬಳಸುವ ಗ್ರಾಹಕರು ಹೆಚ್ಚು ಬೆಲೆ ತೆರಬೇಕು. ಅಂದರೆ; ಬಡವರು ಮತ್ತು ಮಧ್ಯಮ ವರ್ಗದ ಜನರು ವಿದ್ಯುತ್ ಬಳಸದೇ ಕತ್ತಲಲ್ಲಿ ಕೊಳೆಯಬೇಕೆ? ಗತಿಶಕ್ತಿ ಯೋಜನೆ ಮೂಲಕ ದೇಶಕ್ಕೆ ಹೊಸ ಗತಿ ಕಾಣಿಸುವುದು ಎಂದರೆ ಇದೇನಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಇಂಧನ ಇಲಾಖೆಯ ಅಸಮರ್ಪಕ ನಿರ್ವಹಣೆ ಹಾಗೂ ವಿದ್ಯುತ್ ಸೋರಿಕೆಯನ್ನು ತಡೆಯಲಾಗದ ಅದಕ್ಷತೆ ಬಗ್ಗೆ ಜನಕ್ಕೆ ಗೊತ್ತಿದೆ. ಆ ಹೊರೆಯನ್ನು ಜನರ ಮೇಲೆ ಹೇರಿ ಮೊದಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಲೂಟಿಗೆ ತುತ್ತಾಗಿರುವ ಜನರನ್ನು ಮತ್ತಷ್ಟು ಸುಲಿಗೆ ಮಾಡುವ ಪ್ರಯತ್ನ ಇದಾಗಿದೆ ಎಂದಿದ್ದಾರೆ.
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರದಲ್ಲೇ ಇದೆ. ಈಗ ಬೆಲೆ ಏರಿಸಿ, ಇನ್ನೇನು ಚುನಾವಣೆ ದಿನಾಂಕ ಹತ್ತಿರದಲ್ಲಿದೆ ಎನ್ನುವಾಗ ದರ ಇಳಿಸುವ ಸ್ಟಂಟ್ ಇದರ ಹಿಂದೆ ಇದೆ. ವೆಚ್ಚ ಹೊಂದಾಣಿಕೆಯ ಹೊಸ ಐಡಿಯಾ ಅಂದರೆ ಇದೇನಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಯಾವುದೇ ಕಾರಣಕ್ಕೂ ವಿದ್ಯುತ್ ದರ ಏರಿಕೆ ಮಾಡಬಾರದು. ಗ್ರಾಮೀಣ ಪ್ರದೇಶಕ್ಕೆ ಗುಣಮಟ್ಟದ, ನಿಯಮಿತ ವಿದ್ಯುತ್ ಪೂರೈಕೆ ಮಾಡದ ಸರ್ಕಾರಕ್ಕೆ ದರ ಏರಿಕೆ ಮಾಡುವ ನೈತಿಕ ಹಕ್ಕಿಲ್ಲ. ಒಂದು ವೇಳೆ ಏರಿಕೆ ಮಾಡಿದರೆ ಜನರನ್ನು ಒಗ್ಗೂಡಿಸಿ ಜನಾಂದೋಲನ ಇಳಿಯಬೇಕಾಗುತ್ತದೆ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು