ಶಂಖ ಊದುವುದಕ್ಕೆ ಜೆಡಿಎಸ್‍ನಲ್ಲಿ ಜನ ಇಲ್ಲ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆ
ನಮ್ಮ ಶಂಖವನ್ನು ನಾನೇ ಊದಬೇಕು. ಹೀಗಾಗಿ ಎಲ್ಲಾ ಕ್ಷೇತ್ರಗಳಲ್ಲಿಯೂ ನಾನೇ ಪ್ರಚಾರ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಸಚಿವ ಈಶ್ವರಪ್ಪ ಹೇಳಿಕೆಗೆ ಟಾಂಗ್ ನೀಡಿದರು.
ಶಂಖ ಊದುವುದಕ್ಕೆ ಜೆಡಿಎಸ್‍ನಲ್ಲಿ ಜನ ಇಲ್ಲ ಎಂಬ ಸಚಿವ ಈಶ್ವರಪ್ಪ ಹೇಳಿಕೆಗೆಮೈಸೂರಿನಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿ, ನಮಗೆ ಕಾರ್ಯಕರ್ತರೇ ಶಕ್ತಿ, ಕಾರ್ಯಕರ್ತರಿಗೆ ನಾಯಕನನ್ನು ಹುಟ್ಟುಹಾಕುವ ಸಾಮರ್ಥ್ಯ ಇರೋದು. ಹೀಗಾಗಿ ಬಂಡೇಳುವ ಶಾಸಕರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು
ಪರ್ಯಾಯ ನಾಯಕರನ್ನು ಕಾರ್ಯಕರ್ತರೇ ಹುಡುಕುವ ಶಕ್ತಿ ಹೊಂದಿದ್ದಾರೆ. ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ದರಿದ್ದೇವೆ ಎಂದು ಹೇಳಿದರು.
ನಮ್ಮ ಸಾಮರ್ಥ್ಯಕ್ಕನುಸಾರ ಏಳು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದೇವೆ. ಎಲ್ಲೆಲ್ಲಿ ಗೆಲುವಿಗೆ ಅವಕಾಶವಿದೆಯೋ ಅಲ್ಲಿ ಸ್ಪರ್ಧೆ ಮಾಡಲಾಗುತ್ತಿದೆ. ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಸ್ಥಳೀಯ ನಾಯಕರು ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಮಾಡುತ್ತಾರೆ ಎಂದರು
ನನ್ನ ಗುರಿ ಮುಂದಿನ ವಿಧಾನಸಭಾ ಚುನಾವಣೆ ಮೇಲೆ. 123 ಕ್ಷೇತ್ರಗಳನ್ನು ಗೆದ್ದು ಅಧಿಕಾರ ಹಿಡಿಯಬೇಕಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ವಿಧಾನ ಪರಿಷತ್ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದರು.
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು