ಕೋಲಾರ ಜಿಲ್ಲೆಯ ಯರಗೊಳ್ ಯೋಜನೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಭರದಲ್ಲಿ ತಮ್ಮ ವಿರುದ್ಧ ಅಸಂಬದ್ಧವಾಗಿ ನಾಲಿಗೆ ಹರಿ ಬಿಟ್ಟ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ತರಾಟೆ ತೆಗೆದುಕೊಂಡಿದ್ದಾರೆ
ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು, ಮಾಜಿ ಸ್ಪೀಕರ್ ಅವರನ್ನು ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.ಇದನ್ನು ಓದಿ –ಮಾಗಡಿ ಬಳಿ ಮಳೆಗೆ ಕೊಟ್ಟಿಗೆ ಗೋಡೆ ಕುಸಿದು ಇಬ್ಬರು ಮಕ್ಕಳ ಧಾರುಣ ಸಾವು
ವಿಕೃತ, ಕೊಳಕು ಮನಃಸ್ಥಿತಿಯ ಮಾಜಿ ಸ್ಪೀಕರ್ ರಮೇಶ್ ಕುಮಾರ್, ನಾಲಿಗೆ ಮತ್ತು ಮಿದುಳಿನ ನಡುವಿನ ಸಂಪರ್ಕ ಕಳೆದುಕೊಂಡು ಅಸಹಜವಾಗಿ ವರ್ತಿಸುತ್ತಿದ್ದಾರೆ. ಅವರ ವಿಕಾರಗಳಿಗೆ ಕೊನೆಯೇ ಇಲ್ಲದಾಗಿದೆ. ಯರಗೊಳ್ ಯೋಜನೆಗೆ ಅನುಮತಿ ನೀಡಿದ್ದೇ ನಾನು. ಮಾಡಿದ್ದನ್ನೇ ನಾನು ಹೇಳಿದ್ದೇನೆ. ಬೇಕಾದರೆ ರಮೇಶ್ ಕುಮಾರ್ ಅವರು ದಾಖಲೆಗಳನ್ನು ನೋಡಿಕೊಳ್ಳಲಿ. ಕೆಆರ್ ಎಸ್, ಎತ್ತಿನಹೊಳೆ, ಕೆಸಿ.ವ್ಯಾಲಿ, ಹೆಚ್ ಎಎಲ್, ಹೆಚ್ ಎಂಟಿಗಳನ್ನು ನಾನೇ ಮಾಡಿದ್ದು ಎಂದು ಎಲ್ಲಾದರೂ ಹೇಳಿದ್ದೇನೆಯೇ? ಹೇಳಿದ್ದರೆ ಅವರು ಹೇಳಲಿ ಎಂದು ಅವರು ಕಿಡಿಕಾರಿದ್ದಾರೆ.
ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ. ಬಾಲಂಗೋಚಿ ಆಗದಿದ್ದರೆ ರಾಜಕೀಯ ಉಳಿಗಾಲವಿಲ್ಲ. ಪರಾವಾಲಂಬಿ ರಾಜಕಾರಣದ ಕೇರ್ ಆಫ್ ಅಡ್ರೆಸ್ ಆಗಿರುವ ನೀವು ಯಾರ ಕೃಪೆಯಲ್ಲಿದ್ದಿರಿ ಎನ್ನುವುದನ್ನು ಬಿಡಿಸಿ ಹೇಳಬೇಕೆ? ಕೋಲಾರ ಜಿಲ್ಲೆಗೆ ನೀವು ಮಾಡಿದ ಘೋರ ಅನ್ಯಾಯ, ಎಸಗಿದ ಪಾಪ ಕಣ್ಮುಂದೆಯೇ ಇದೆ ಎಂದಿದ್ದಾರೆ.
ಎತ್ತಿನಹೊಳೆ ಹರಿಸುತ್ತೇನೆ ಎಂದು ನಂಬಿಸಿ ಕೆರೆಗಳ ತುಂಬಾ ವಿಷವನ್ನು ತುಂಬಿಸಿದ ಧೂರ್ತ ಕೃತ್ಯಕ್ಕೆ ಕಾರಣರು ಯಾರು? ಕೆಸಿ ವ್ಯಾಲಿ ಎತ್ತುವಳಿ ಲೆಕ್ಕ ತೆಗೆದರೆ ಮುಖ ಎಲ್ಲಿ ಇಟ್ಟುಕೊಳ್ಳುತ್ತೀರಿ ಸ್ವಯಂ ಘೋಷಿತ ಸಂವಿಧಾನ ತಜ್ಞರೇ? ಎಂದು ರಮೇಶ್ ಕುಮಾರ್ʼಗೆ ಚಾಟಿ ಬೀಸಿದ್ದಾರೆ ಮಾಜಿ ಮುಖ್ಯಮಂತ್ರಿಗಳು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ