ಭಾರತವನ್ನು ‘ಹಿಂದಿಸ್ತಾನ’ ಮಾಡಲು ಹೊರಟ ಕೇಂದ್ರ -ಹಿಂದಿ ಹೇರಿಕೆ ವಿರುದ್ಧ HDK ಕಿಡಿ

Team Newsnap
1 Min Read

ಕೇಂದ್ರವು ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಂದೀ ಹೇರಿಕೆಯ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ.

ಅಮಿತ್​ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಹಾಗೂ ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿಯಾಗಿದೆ.ಇದನ್ನು ಓದಿ –ರಾಯಚೂರಿನಿಂದ ಸಿಎಂ ಬೊಮ್ಮಾಯಿ, BSY ನೇತೃತ್ವದಲ್ಲಿ ಬಿಜೆಪಿಯ ಜನ ಸಂಕಲ್ಪ ಯಾತ್ರೆ ಆರಂಭ

ಹಿಂದಿ ಹೇರಿಕೆ ವಿಚಾರ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಸರಣಿ ಟ್ವೀಟ್​ ಮಾಡಿ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಹಿಂದಿ ಹೇರಿಕೆಯ ವರದಿ ಶಿಫಾರಸುಗಳನ್ನು ಓದಿ ನನಗೆ ದೊಡ್ಡ ಆಘಾತವೇ ಆಯಿತು. ಸರ್ವಾಧಿಕಾರಿ ಮನಃಸ್ಥಿತಿಯಿಂದ ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕಿ ಇಡೀ ದೇಶದ ಮೇಲೆ ಹಿಂದಿ ಹೇರಿ ಬಹುತ್ವದ ಭಾರತವನ್ನು ಹಿಂದಿಸ್ತಾನ್ ಮಾಡುವ ಹುನ್ನಾರ ಇದರ ಹಿಂದಿದೆ ಎಂದಿದ್ದಾರೆ.

WhatsApp Image 2022 10 11 at 10.33.58 AM

ಒಂದು ದೇಶ, ಒಂದು ಧರ್ಮ, ಒಂದು ಭಾಷೆ ಎನ್ನುವ ವಿಚ್ಛಿದ್ರಕಾರಿ ನೀತಿಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ನಿರ್ನಾಮ ಮಾಡುವುದೇ ಅಮಿತಾ ಶಾ ಸಮಿತಿಯ ಅಮಿತೋದ್ದೇಶ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಏಕಭಾಷೆಯ ಅಧಿಪತ್ಯವನ್ನು ಭಾರತ ಒಪ್ಪುವುದಿಲ್ಲ. ಬಹುತ್ವದಲ್ಲಿ ಏಕತೆಯ ಮೂಲಕ ಅಖಂಡವಾಗಿರುವ ಭಾರತವನ್ನು ಒಡೆದು ಆಳುವ ನೀತಿ ರಾಷ್ಟ್ರದ ಒಡಕಿಗೆ ಕಾರಣವೂ ಆಗಬಹುದು.

ಕೇಂದ್ರ ಸರಕಾರ ಕೂಡಲೇ ಈ ವರದಿಯನ್ನು ಹಿಂಪಡೆದು, ಎಲ್ಲ ಭಾಷೆಗಳನ್ನೂ ಸಮಾನವಾಗಿ ನೋಡುವ ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಬೇಕು ಎಂದು ಹೆಚ್​ಡಿಕೆ ಟ್ವೀಟ್​ ನಲ್ಲಿ ಒತ್ತಾಯಿಸಿದ್ದಾರೆ.

Share This Article
Leave a comment