ಕಾಂಗ್ರೆಸ್ ನಾಯಕರ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಮತ್ತೆ ಗುಡುಗಿದ್ದಾರೆ. ಇಂದು 13 ಟ್ವೀಟ್‌ಗಳಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಮಾಜಿ ಸಿಎಂ ಕುಮಾರಸ್ವಾಮಿ ಕಟುವಾದ ಟೀಕೆ ಮಾಡಿದ್ದಾರೆ.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ನಾವು ಕೈಗೊಂಡಿರುವ ಹೋರಾಟ ಪಕ್ಷಾತೀತ. ಇದನ್ನು ಟೀಕೆ ಮಾಡುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರೂ ಪಾದಯಾತ್ರೆಯಲ್ಲಿ ಭಾಗವಹಿಸಬಹುದು ಎಂದಿದ್ದಾರೆ ಕೆಪಿಸಿಸಿ ಅಧ್ಯಕ್ಷರು. ಅವರು ನನ್ನನ್ನೂ ಸೇರಿಸಿ 83 ತಾಲೂಕುಗಳ ಜನರಿಗೆ ʼಮೇಕೆದಾಟು ಮಕ್ಮಲ್ ಟೋಪಿʼ ಹಾಕಲು ಹೊರಟಿದ್ದಾರೆ ಎಂದು ಹೇಳಿದ್ದಾರೆ.
ನೀರಾವರಿ ವಿಷಯದಲ್ಲಿ ರಾಜ್ಯಕ್ಕೆ ಹೆಚ್.ಡಿ.ದೇವೇಗೌಡರು ಕೊಟ್ಟ ಕಾಣಿಕೆ ಅಗಣಿತ. ತಮ್ಮ ಜೀವಿತಾವಧಿಯನ್ನೇ ಈ ನೆಲಕ್ಕೆ ನೀರರಿಸಲು ಮುಡಿಪಿಟ್ಟ ಭಗೀರಥರು ಅವರು. ಮೇಕೆದಾಟು ಯೋಜನೆಯ ಮೂಲ ರೂವಾರಿಯೇ ಅವರು. ಅವರನ್ನೇ ಮರೆತ ಕಾಂಗ್ರೆಸ್ ನಾಯಕರು ‘ಸತ್ಯಕ್ಕೆ ಸಮಾಧಿ’ ಕಟ್ಟುತ್ತಿದ್ದಾರೆ ಎಂದು ಇನ್ನೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಅವರಿಗೆ ಸತ್ಯ ಹೇಳಲು ನಾಲಿಗೆ ಹೊರಳುತ್ತದೆ. ಆದರೆ, ಸತ್ಯಕ್ಕೆ ನಾಲಿಗೆ ಪ್ರಮೇಯವೇ ಇಲ್ಲ, ಸತ್ಯ ಸತ್ಯವೇ. ದೇವೇಗೌಡರು ಅಂತಹ ಸತ್ಯದ ಸಾಕ್ಷಿ. ನೀರಾವರಿಗಾಗಿ ಅವರು ಅವಿರತವಾಗಿ ಶ್ರಮಿಸಿ ನಡೆದಾಡಿದ ನೆಲದ ಮಣ್ಣಿನಮಕ್ಕಳ ನಂಬಿಕೆಯನ್ನೇ ʼಬುಲ್ಡೋಜ್ʼ ಮಾಡುವಂಥ ರಾಜಕಾರಣ ʼಕೈʼ ಪಕ್ಷ ಮಾಡುತ್ತಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
More Stories
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
ತುಪ್ಪ ಎಂಬ ಮಹಾ ಔಷಧಿ