ನಿಮ್ಮ ಅಂತ್ಯ ಕಾಲ ಆರಂಭ. ಸಿದ್ದ ಹಸ್ತ ಸಿದ್ದರಾಮಯ್ಯ ಕಾಂಗ್ರೆಸ್ ಹಾಗೂವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಯುದ್ದ ಆರಂಭ ಮಾಡಿದ್ದಾರೆ.
ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ, ಕಾಂಗ್ರೆಸ್ ಮೋಸ ಮಾಡುತ್ತಾರೆ. ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಎಂದು ಹೆಚ್ ಡಿ ಕೆ ಆಕ್ರೋಶ ಹೊರಹಾಕಿದ್ದಾರೆ.
ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲೀಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಕುಮಾರ ಸ್ವಾಮಿ ಟ್ಬಿಟ್ ನಲ್ಲಿ ಹೇಳಿದ್ದಾರೆ.
ನಂಬಿ ಅಧಿಕಾರ ಕೊಟ್ಟ ಪಕ್ಷದ ಕತ್ತನ್ನೇ ಕುಯ್ಯುವ, ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಸಿದ್ದಹಸ್ತ ಸೂತ್ರಧಾರಿಯ ಒಳ ರಾಜಕೀಯಕ್ಕೆ ಬಲಿಯಾಗುತ್ತಿರುವ ಅಲ್ಪಸಂಖ್ಯಾತ ನಾಯಕರ ದೊಡ್ಡ ಪಟ್ಟಿಯೇ ಇದೆ. ಕಾಂಗ್ರೆಸ್‍ನಲ್ಲಿ ನಡೆದಿರುವ ಅಲ್ಪಸಂಖ್ಯಾತ ನಾಯಕರ ರಾಜಕೀಯ ನರಮೇಧಕ್ಕೆ ಯಾರು ಕಾರಣ ಎಂದು ಜನರಿಗೆ ಗೊತ್ತಾಗಲಿ. 2012ರ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಇಕ್ಬಾಲ್ ಅಹಮದ್ ಸರಡಗಿ ಸೋಲುತ್ತಾರೆ. ಪಕ್ಷೇತರ ಅಭ್ಯರ್ಥಿಯಾಗಿದ್ದ ಭೈರತಿ ಸುರೇಶ್ ತಮ್ಮ ಗೆಲುವಿಗೆ ಬೇಕಿದ್ದ 19 ಮತ ಮೀರಿ 23 ಮತ ಪಡೆದು ಗೆಲ್ಲುತ್ತಾರೆ. ಇಲ್ಲಿ ಸರಡಗಿ ಸೋಲಿಗೆ, ಬೈರತಿ ಸುರೇಶ್ ಗೆಲುವಿಗೆ ಕಾರಣವಾದ ಸಿದ್ದಸೂತ್ರ ಹಣೆದಿದ್ದು ಯಾರು? ಎಂದು ಕ್ರಾಂಂಗ್ರೆಸ್ ಪಕ್ಷವನ್ನು ಪ್ರಶ್ನೆ ಮಾಡಿದ್ದಾರೆ.
ಟ್ವಿಟ್ ನ ಪ್ರಮುಖ ಅಂಶಗಳು :
1)ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸ್
2) ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡುವ ಸಿದ್ದಹಸ್ತ ಸೂತ್ರಧಾರಿ
3) ತೊಟ್ಟಿಲನ್ನೂ ತೂಗಿ, ಮಗು ಚಿವುಟುತ್ತಾ, ಕತ್ತು ಕುಯ್ಯುವ ರಾಜಕಾರಣ
4 ) ಸಿದ್ದಹಸ್ತರೇ ನಿಮಗೆ ಪಾಠ ಕಲಿಸುವ ಜನತಾಪರ್ವ ಆರಂಭವಾಗಿದೆ
- KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
- ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
- ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
- ಮೈಸೂರು ಜೈಲಿನಲ್ಲಿ ಮೂವರು ಕೈದಿಗಳ ದುರ್ಮರಣ
- ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ ಮದುವೆ ಸಹಾಯಧನ: ₹60,000 ಪಡೆಯಲು ಅರ್ಜಿ ಆಹ್ವಾನ!
More Stories
KSRTC ಬಸ್-ಲಾರಿ ನಡುವೆ ಡಿಕ್ಕಿ: ಐವರು ಸ್ಥಳದಲ್ಲೇ ಸಾವು
ವರದಕ್ಷಿಣೆ ಕಿರುಕುಳ ತಾಳಲಾರದೇ ಮಹಿಳೆ ಆತ್ಮಹತ್ಯೆ – ಪತಿ ವಿಷ ಸೇವಿಸಿ ಆತ್ಮಹತ್ಯೆ ಯತ್ನ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ