ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ ಪ್ರಾರಂಭಿಸಿದೆ.
ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್ ಹಸ್ತಾಂತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಡ್ ಹೊಂದಿರುವವರಿಗೆ ಹೊರರೋಗಿ ವಿಭಾಗದ ಸಲಹೆ, ಪ್ರಯೋಗಾಲಯಗಳಲ್ಲಿ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ 20 ರಷ್ಟು ರಿಯಾಯಿತಿ ದೊರೆಯಲಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ವೈಟ್ ಫೀಲ್ಡ್ ಹಾಗೂ ಜಯನಗರದ ಘಟಕದಲ್ಲಿ ಕಾರ್ಡ್‌ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ