- ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು
- ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು
- ಎದೆ ಉರಿ ಕಾಣಿಸಿಕೊಂಡ ಹಿನ್ನೆಲೆ ಹೆಚ್.ಡಿ ರೇವಣ್ಣ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್
ಬೆಂಗಳೂರು : ಅಶ್ಲೀಲ ವಿಡಿಯೋ ಹಾಗೂ ಮಹಿಳೆಯ ಕಿಡ್ನಾಪ್ ಕೇಸ್‌ನಲ್ಲಿ ಬಂಧನದಲ್ಲಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಆರೋಗ್ಯದ ಸಮಸ್ಯೆ ಎದುರಾಗಿದೆ.
ಎಸ್‌ಐಟಿ ವಶದಲ್ಲಿರುವ ಹೆಚ್.ಡಿ ರೇವಣ್ಣ ಅವರನ್ನು ಅಧಿಕಾರಿಗಳು ಮೆಡಿಕಲ್ ಟೆಸ್ಟ್‌ಗೆ ಕರೆದುಕೊಂಡು ಹೋಗಿದ್ದಾರೆ.
ಹೆಚ್.ಡಿ ರೇವಣ್ಣ ಅವರು ಮಧ್ಯಾಹ್ನದಿಂದ ಹೊಟ್ಟೆ ಉರಿ ಹಾಗೂ ಎದೆನೋವು ಎನ್ನುತ್ತಿದ್ದರು. ಹೀಗಾಗಿ ಎಸ್‌ಐಟಿ ಅಧಿಕಾರಿಗಳು ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದರು.
ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮಾಡಿದ ಬಳಿಕ ರೇವಣ್ಣ ಅವರಿಗೆ ಎದೆ ಉರಿ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆ ವಿಕ್ಟೊರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಹೆಚ್.ಡಿ ರೇವಣ್ಣ ಅವರಿಗೆ ಎಸ್‌ಐಟಿ ಅಧಿಕಾರಿಗಳು ನುರಿತ ವೈದ್ಯರಿಂದ ಮತ್ತೊಂದು ಸುತ್ತಿನ ಚಿಕಿತ್ಸೆ ನೀಡುತ್ತಿದ್ದಾರೆ. ಡಾಕ್ಟರ್ ಟೆಸ್ಟಿಂಗ್ ಮಾಡಿದ ಬಳಿಕ ಹೆಚ್.ಡಿ ರೇವಣ್ಣ ಅವರನ್ನು ಅಡ್ಮಿಟ್ ಮಾಡಬೇಕಾ? ಬೇಡ್ವಾ ಎನ್ನುವುದರ ಬಗ್ಗೆ ಅಧಿಕಾರಿಗಳು ನಿರ್ಧಾರ ಮಾಡಲಿದ್ದಾರೆ
ಹೆಚ್.ಡಿ ರೇವಣ್ಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿರುವುದರಿಂದ ಆಸ್ಪತ್ರೆಯ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
ಜಯನಗರ ಎಸಿಪಿ ನಾರಾಯಣಸ್ವಾಮಿ, ವಿವಿಪುರಂ ಎಸಿಪಿ ಶಾಮಿದ್ ಬಾಷಾ ನೇತೃತ್ವದಲ್ಲಿ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚುವರಿ ಬ್ಯಾರಿಕೇಡ್ ತರಿಸಿದ್ದಾರೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ