Main News

ಒಂದೇ ದಿನ 12 ಲಕ್ಷ ಕೋವಿಡ್ ಲಸಿಕೆ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್

  • ಕ್ಷಯ ನಿರ್ಮೂಲನೆ ಬಗ್ಗೆ ಚರ್ಚೆಗೆ ಕೇಂದ್ರ ಸಚಿವರ ಅಧ್ಯಕ್ಷತೆಯಲ್ಲಿ ಸಭೆ

ಬುಧವಾರದ (ಸೆಪ್ಟೆಂಬರ್ 1) ಮೊದಲ ಲಸಿಕಾ ಉತ್ಸವದ ದಿನ ಗುರಿಯನ್ನು ಮೀರಿ 12 ಲಕ್ಷ ಲಸಿಕೆ ಡೋಸ್ ನೀಡಲಾಗಿದೆ. ಈ ಮೂಲಕ ಇಡೀ ದೇಶದಲ್ಲೇ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬುಧವಾರದ ಲಸಿಕಾ ಉತ್ಸವದಲ್ಲಿ 10 ಲಕ್ಷ ಲಸಿಕೆ ನೀಡುವ ಗುರಿ ಇತ್ತು. ಆರೋಗ್ಯ ಇಲಾಖೆಯ ಅಧಿಕಾರಿಗಳು, ಜಿಲ್ಲಾಡಳಿತ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದಾರೆ. ಹಾಗೆಯೇ ಜನರು ಕೂಡ ಸ್ವಯಂಪ್ರೇರಿತರಾಗಿ ಬಂದು ಲಸಿಕೆ ಪಡೆದಿದ್ದಾರೆ. ಇದರಿಂದಾಗಿ ಗುರಿ ಮೀರಿ ಸಾಧನೆಯಾಗಿದ್ದು, ಒಂದೇ ದಿನ ಒಟ್ಟು 12,04,402 ಲಸಿಕೆ ನೀಡಲಾಗಿದೆ. ದೇಶದಲ್ಲಿ ನಿನ್ನೆ ಕರ್ನಾಟಕ ಮೊದಲ ಸ್ಥಾನದಲ್ಲಿತ್ತು. ಬಿಬಿಎಂಪಿ ವ್ಯಾಪ್ತಿಯಲ್ಲಿ 1,85,488 ಡೋಸ್ ನೀಡಲಾಗಿದೆ. ಬೆಳಗಾವಿ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, 99,973 ಡೋಸ್ ನೀಡಲಾಗಿದೆ. ಕೊಡಗು, ಗದಗ, ಚಾಮರಾಜನಗರ, ಯಾದಗಿರಿ ಜಿಲ್ಲೆಯಲ್ಲಿ ಅತಿ ಕಡಿಮೆಯಾಗಿದೆ. ಈ ಜಿಲ್ಲೆಗಳಲ್ಲಿ 20 ಸಾವಿರಕ್ಕಿಂತ ಕಡಿಮೆ ಇದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ 50 ಸಾವಿರ, ಚಿಕ್ಕಮಗಳೂರಿನಲ್ಲಿ 44,000, ಮಂಡ್ಯದಲ್ಲಿ 72,000, ಮೈಸೂರಿನಲ್ಲಿ 51,000 ಹೀಗೆ ಲಸಿಕಾ ಉತ್ಸವದಿಂದ ವೇಗ ಬಂದಿದೆ. ದಿನಕ್ಕೆ 5 ಲಕ್ಷ ಲಸಿಕೆ ನೀಡುವ ಗುರಿ ಇದ್ದು, ಆಗಸ್ಟ್ ತಿಂಗಳಲ್ಲಿ 1.12 ಕೋಟಿ ಡೋಸ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಕೇರಳದಲ್ಲಿ ಇನ್ನೂ ಸೋಂಕು ಇದ್ದು, ಪ್ರಕರಣಗಳ ಸಂಖ್ಯೆ ಕಡಿಮೆಯಾಗಿಲ್ಲ. ಇದಕ್ಕಾಗಿ ಸಾಂಸ್ಥಿಕ ಕ್ವಾರಂಟೈನ್ ನಿಯಮ ತರಲಾಗಿದೆ. ನೀಟ್ ಪರೀಕ್ಷೆ ಸಮಯದಲ್ಲಿ ಇದು ಕಷ್ಟ ಎಂಬ ಅಭಿಪ್ರಾಯ ಬಂದಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಣ ಸಂಸ್ಥೆಗಳೇ ಕ್ವಾರಂಟೈನ್ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ. ಕೈಗಾರಿಕೆ, ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮಾಡುವವರಿಗೆ ಕ್ವಾರಂಟೈನ್ ಗೆ ಅದೇ ಸಂಸ್ಥೆ ವ್ಯವಸ್ಥೆ ಮಾಡಬೇಕು. ಸದ್ಯಕ್ಕೆ ಜನರು ಮನೆಯಲ್ಲೇ ಕ್ವಾರಂಟೈನ್ ಆಗಲು ಅವಕಾಶವಿದೆ. ಪ್ರತಿ ದಿನ ಕೇರಳದಿಂದ ರಾಜ್ಯಕ್ಕೆ ಬರುವವರು ಪ್ರತಿ ವಾರ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತೋರಿಸಬೇಕು ಎಂದರು.

ಕ್ಷಯ ನಿರ್ಮೂಲನೆ-ಕೇಂದ್ರ ಸಚಿವರ ಸಭೆ:

ಕೇಂದ್ರ ಆರೋಗ್ಯ ಸಚಿವ ಮನ್‍ಸುಖ್ ಮಾಂಡವೀಯ ಅವರು ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಿದರು. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, 2025 ಕ್ಕೆ ಕ್ಷಯ ನಿರ್ಮೂಲನೆ ಮಾಡುವುದು ಪ್ರಧಾನಿಯವರ ಗುರಿ. ಇದಕ್ಕಾಗಿ ಕೋವಿಡ್ ಸಮಯದಲ್ಲಿ ಕ್ಷಯ ಪರೀಕ್ಷೆ ಕೈಗೊಳ್ಳಲಾಗಿದೆ. ಕೋವಿಡ್ ನಿಂದ 29 ಲಕ್ಷ ಮಂದಿ ಗುಣಮುಖರಾಗಿದ್ದು, ಎಲ್ಲರಿಗೂ ಕ್ಷಯ ಪರೀಕ್ಷೆ ಮಾಡಲಾಗುತ್ತಿದೆ. ಈವರೆಗೆ ಸುಮಾರು 7 ಲಕ್ಷ ಜನರಿಗೆ ಪರೀಕ್ಷೆ ಮಾಡಿದ್ದು, 157 ಪ್ರಕರಣಗಳಲ್ಲಿ ಕ್ಷಯ ಕಂಡುಬಂದಿದೆ. ಈ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಒಂದು ತಿಂಗಳಿಂದ ಗಡಿಭಾಗಗಳಲ್ಲಿ ಎಚ್ಚರ ವಹಿಸಲಾಗಿದೆ. ಗಡಿಭಾಗದ 20 ಕಿ.ಮೀ. ವ್ಯಾಪ್ತಿಯಲ್ಲಿ ಲಸಿಕೆ ನೀಡಬೇಕು ಎಂದು ಸೂಚಿಸಲಾಗಿದೆ. ಕೆಜಿಎಫ್ ನ ನರ್ಸಿಂಗ್ ಸಂಸ್ಥೆಯಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಲ್ಲಿ ಸೋಂಕು ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024