ಪ್ರವಚನ ಮಾಡುತ್ತಿದ್ದಾಗ ಹಠಾತ್ ಸಂಭವಿಸಿದ ಹೃದಯಾಘಾತದಿಂದ ಸ್ವಾಮೀಜಿಯೊಬ್ಬರು ಸಾವನ್ನಪ್ಪಿದ ಘಟನೆಯ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳಗ ಗ್ರಾಮದ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ್ ಮಠದ ಸಂಗನಬಸವ ಮಹಾಸ್ವಾಮೀಜಿ (53)ಲಿಂಗೈಕ್ಯರಾಗಿದ್ದಾರೆ.
ನವೆಂಬರ್ 6 ರಂದು ಘಟನೆ ನಡೆದಿದೆ. ತಡವಾಗಿ ಬೆಳಕಿಗೆ ಬಂದಿದೆ.
ಸಾವನ್ನಪ್ಪಿದ ದಿನವೇ ಸ್ವಾಮಿಜಿ ಅವರ ಹುಟ್ಟುಹಬ್ಬ ಇತ್ತು. ಹುಟ್ಟುಹಬ್ಬವನ್ನು ಆಚರಿಸಿಕೊಂಡೇ ಭಕ್ತರಿಗೆ ಆಶೀರ್ವಚನ ನೀಡುತ್ತಿದ್ದರು. ಈ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಸ್ವಾಮೀಜಿ ಅಸುನೀಗುವ ದೃಶ್ಯ ಭಕ್ತರೊಬ್ಬರ ಮೊಬೈಲ್ನಲ್ಲಿ ಸೆರೆಯಾಗಿದೆ, ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು