February 19, 2026

Newsnap Kannada

The World at your finger tips!

heart attack , kid , death

ಕಬಡ್ಡಿ ಆಡುತ್ತಿದ್ದ ವೇಳೆಯಲ್ಲೇ ಹೃದಯಾಘಾತ : ವಿದ್ಯಾರ್ಥಿನಿ ಸಾವು

Spread the love

ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆಯ ಖಾಸಗಿ ಕಾಲೇಜಿನಲ್ಲಿ ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಧಾರವಾಡ ಮೂಲದ ವಿದ್ಯಾರ್ಥಿನಿ ಸಂಗೀತಾ (17) ಮೃತಪಟ್ಟಿದ್ದಾಳೆ.ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ನಾಮಕರಣ : ಸಿಎಂ ಬೊಮ್ಮಾಯಿ ಘೋಷಣೆ

ಆನೇಕಲ್ ತಾಲೂಕಿನ ಬಳಗಾರನಹಳ್ಳಿಯಲ್ಲಿ ಸಂಗೀತಾ ವಾಸವಿದ್ದಳು. ಕಬಡ್ಡಿ ಆಡುತ್ತಿರುವಾಗಲೇ ಕುಸಿದುಬಿದ್ದ ಸಂಗೀತಾಳನ್ನು ತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಸಂಗೀತಾ ಮೃತಪಟ್ಟಿದ್ದರು.

ಅತ್ತಿಬೆಲೆ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಸಂಗೀತಾ ಮೃತದೇಹ ಸ್ಥಳಾಂತರಿಸಲಾಗಿದೆ.

ಸಂಗೀತಾ ಸಾವು ಹಿನ್ನೆಲೆ ಇಂದು ಕಾಲೇಜಿಗೆ ರಜೆ ನೀಡಿಲಾಗಿದೆ.

error: Content is protected !!