ಚಿನ್ನ ಖರೀದಿಸಲು ಬಯಸುವವರಿಗೆ ಸಿಹಿಸುದ್ದಿ ಸಿಕ್ಕಿದೆ. ಚಿನ್ನದ ದರ ಇಂದು ಕುಸಿದಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿದಿರುವುದು ದೇಶಿಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿದೆ ಎಂದು ಬುಲಿಯನ್ ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಬೆಳ್ಳಿ ದರ ಕೂಡ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಏಪ್ರಿಲ್ 15 ರಂದು, 24 ಕ್ಯಾರೆಟ್ ಚಿನ್ನದ ಬೆಲೆ 760 ರೂಪಾಯಿ ಕುಸಿದಿದೆ. ಇದರೊಂದಿಗೆ ಪ್ರತಿ ಹತ್ತು ಗ್ರಾಂ ಚಿನ್ನದ ದರ 61,040ಕ್ಕೆ ಕುಸಿದಿದೆ.
22 ಕ್ಯಾರೆಟ್ ಚಿನ್ನ ಕೂಡ ಇಳಿಕೆಯಾಗಿದೆ ಅಲಂಕಾರಿಕ ಚಿನ್ನದ ದರ 700 ಕುಸಿದಿದೆ. ಇದರೊಂದಿಗೆ ಪ್ರತಿ ಹತ್ತು ಗ್ರಾಂ ಚಿನ್ನ 55,950 ರೂಪಾಯಿ ಆಗಿದೆ.
ಇಂದು ಬೆಳ್ಳಿ ಬೆಲೆ 1,500 ರೂಪಾಯಿ ಇಳಿಕೆಯಾಗಿದೆ. ಇದರಿಂದಾಗಿ ಪ್ರತಿ ಕೆಜಿ ಬೆಳ್ಳಿಯ ಬೆಲೆ 81,500 ರೂಪಾಯಿಗೆ ಕುಸಿದಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳಿಗೆ ಸರಕು ಮತ್ತು ಸೇವಾ ತೆರಿಗೆ (GST)ಯನ್ನ ಸೇರಿಸಲಾಗುತ್ತದೆ. ಹೀಗಾಗಿ ಇದೂ ಸೇರಿದ್ರೆ ಚಿನ್ನದ ಬೆಲೆ ಕೊಂಚ ಹೆಚ್ಚಲಿದೆ. ಇನ್ನು ತಯಾರಿಕೆಯ ಶುಲ್ಕವೂ ಇದ್ದು, ಇವುಗಳೂ ಸೇರಿದರೆ ಕಚ್ಚಾ ದರ ಇನ್ನೂ ಹೆಚ್ಚಲಿದೆ.ಇದನ್ನು ಓದಿ –ನಟ ಚೇತನ್ ಅಹಿಂಸಾ ಭಾರತದ ವೀಸಾ ರದ್ದು
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
- ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ ಮತ್ತು ಸಾಯಿರಾ ಬಾನು ವಿಚ್ಛೇದನ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ