ಮಂಡ್ಯದಲ್ಲಿ ಎರಡು ದಿನಗಳಿಂದ ಧಾರಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಳ್ಳ, ನದಿಗಳೆಲ್ಲಾ ಭರ್ತಿಯಾಗಿ ಹರಿಯುತ್ತಿದೆ. ಕೆಆರ್ ಎಸ್ ಡ್ಯಾಂ ಕೂಡ ಒಳಹರಿವಿನ ಪ್ರಮಾಣದಲ್ಲಿ 54,311 ಕ್ಯೂಸೆಕ್ ನೀರು ಏರಿಕೆಯಾಗಿದೆ.
ಕಳೆದೆರಡು ದಿನಗಳಿಂದ ಕಾವೇರಿ ಜಲನಯನ ಪ್ರದೇಶದಲ್ಲಿ ಉತ್ತಮವಾದ ಮಳೆಯಾಗುತ್ತಿರುವ ಕಾರಣ ಒಳ ಹರಿವಿನ ಪ್ರಮಾಣ ಹೆಚ್ಚಳವಾಗಿದೆ.
ಒಳ ಹರಿವು ಏರಿಕೆಯಾಗುತ್ತಿದ್ದಂತೆ ಹೊರ ಹರಿವಿನ ಪ್ರಮಾಣವನ್ನು ಅಧಿಕಾರಿಗಳು ಹೆಚ್ಚಿಸಿದ್ದಾರೆ. ಡ್ಯಾಂ ಸಂಪೂರ್ಣ ಭರ್ತಿಯಾಗಿರುವ ಕಾರಣ ಡ್ಯಾಂನಿಂದ ನದಿಗೆ 56,624 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಎ.ಪಿ.ಜೆ.ಅಬ್ದುಲ್ ಕಲಾಂ ( Abdul Kalam )
124.80 ಅಡಿ ಗರಿಷ್ಟ ಸಾಮರ್ಥ್ಯವಿರುವ ಕೆಆರ್‌ಎಸ್ ಡ್ಯಾಂ ಸದ್ಯ 124.70 ಅಡಿಯಷ್ಟು ಭರ್ತಿಯಾಗಿದೆ. ಡ್ಯಾಂಗೆ 54,311 ಕ್ಯೂಸೆಕ್ ಒಳಹರಿವು ಬರುತ್ತಿದ್ದರೆ, 56,624 ಕ್ಯೂಸೆಕ್ ನೀರು ಡ್ಯಾಂನಿಂದ ನದಿಗೆ ಹೋಗುತ್ತಿದೆ. ಕೆಆರ್‍ಎಸ್ ಡ್ಯಾಂ 49.475 ಟಿಎಂಸಿ ನೀರಿನ ಸಾಂದ್ರತೆ ಹೊಂದಿದ್ದು, ಸದ್ಯ 49.312 ಟಿಎಂಸಿ ಭರ್ತಿಯಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ