ತಮಿಳುನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯ ಅವಾಂತರಕ್ಕ ಸಿಲುಕಿ ಮೂವರು ಸಾವನ್ನಪ್ಪಿದ್ದಾರೆ.
ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್, ಚೆಂಗಲೆಪಟ್ಟು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಅಂದರೆ 20 ಸೆ.ಮೀ.ನಷ್ಟು ಮಳೆಯಾಗಿ , ಪ್ರವಾಹ ಪರಿಸ್ಥಿತಿ ಉಂಟಾಗಿದೆ.
ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತವು ರಾಜ್ಯದಲ್ಲಿ ಭಾರೀ ಮಳೆಗೆ ಕಾರಣವಾಗಿದೆ. ರಾಜಧಾನಿ ಚೆನ್ನೈನಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದೆ ರಸ್ತೆಗಳು ಜಲಾವೃತಗೊಂಡಿದೆ. ಮನೆಗಳಿಗೂ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ತೀವ್ರ ಮಳೆಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಪ್ರಯಾಣಿಕರು ಪರದಾಡುವಂತಾಗಿದೆ, ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಚೆನ್ನೈನ ನಾಲ್ಕು ಸುರಂಗ ಮಾರ್ಗಗಳನ್ನು ಮುಚ್ಚಿ, 145ಕ್ಕೂ ಹೆಚ್ಚು ಪಂಪ್‌ಗಳನ್ನು ಬಳಸಿ ಮಳೆ ನೀರನ್ನು ಪಂಪ್ ಮಾಡಲಾಗುತ್ತಿದೆ.
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
- ನ.20ರಂದು ಕರ್ನಾಟಕದಲ್ಲಿ ಬಾರ್ ಬಂದ್
- ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
More Stories
ಶೀಘ್ರದಲ್ಲೇ ಅಡುಗೆ ಎಣ್ಣೆಗಳ ಬೆಲೆ ಏರಿಕೆ ಸಾಧ್ಯತೆ
ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ