ತಮಿಳುನಾಡಿನಲ್ಲಿ ಮತ್ತೆ ವರುಣನ ಆರ್ಭಟ: 3 ಬಲಿ – ಚೆನ್ನೈ ಸಂಪೂರ್ಣ ಜಲಾವೃತ

Team Newsnap
1 Min Read

ತಮಿಳುನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಮಳೆಯ ಅವಾಂತರಕ್ಕ ಸಿಲುಕಿ ಮೂವರು ಸಾವನ್ನಪ್ಪಿದ್ದಾರೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್‌, ಚೆಂಗಲೆಪಟ್ಟು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ಅಂದರೆ 20 ಸೆ.ಮೀ.ನಷ್ಟು ಮಳೆಯಾಗಿ , ಪ್ರವಾಹ ಪರಿಸ್ಥಿತಿ ಉಂಟಾಗಿದೆ.

ಕರಾವಳಿಯಲ್ಲಿ ಉಂಟಾಗಿರುವ ಚಂಡಮಾರುತವು ರಾಜ್ಯದಲ್ಲಿ ಭಾರೀ ಮಳೆಗೆ ಕಾರಣವಾಗಿದೆ. ರಾಜಧಾನಿ ಚೆನ್ನೈನಲ್ಲಿ 20 ಸೆ.ಮೀ.ನಷ್ಟು ಮಳೆಯಾಗಿದೆ ರಸ್ತೆಗಳು ಜಲಾವೃತಗೊಂಡಿದೆ. ಮನೆಗಳಿಗೂ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ತೀವ್ರ ಮಳೆಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿದೆ ಪ್ರಯಾಣಿಕರು ಪರದಾಡುವಂತಾಗಿದೆ, ಮೆಟ್ರೋ ಸಂಚಾರವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.

ಚೆನ್ನೈನ ನಾಲ್ಕು ಸುರಂಗ ಮಾರ್ಗಗಳನ್ನು ಮುಚ್ಚಿ, 145ಕ್ಕೂ ಹೆಚ್ಚು ಪಂಪ್‌ಗಳನ್ನು ಬಳಸಿ ಮಳೆ ನೀರನ್ನು ಪಂಪ್‌ ಮಾಡಲಾಗುತ್ತಿದೆ.

Share This Article
Leave a comment