ಮಂಡ್ಯ ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆ

Team Newsnap
1 Min Read

ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿನ ಸುಳಿಗಾಳಿ ಸೃಷ್ಠಿಯ ಪರಿಣಾಮ ರಾಜ್ಯದಲ್ಲಿ ಮಳೆಗೆ ಪೂರಕ ವಾತಾವರಣ ಇರುವುದರಿಂದ, ಮುಂದಿನ ಮೂರು ನಾಲ್ಕು ದಿನ ಭಾರೀ ಮಳೆಯಾಗಲಿದೆ

ಹವಾಮಾನ ಇಲಾಖೆ ಮುನ್ಸೂಚನೆ ನೀಡಿ, ವಿದರ್ಭದಿಂದ ಆಂಧ್ರ ಪ್ರದೇಶದ ದಕ್ಷಿಣ ತುದಿಯವರೆಗೆ ಟ್ರಫ್ ಹಬ್ಬಿರುವುದು, ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ, ಅರಬ್ಬೀ ಸಮುದ್ದದ ಕೇರಳ ಭಾಗದಲ್ಲಿನ ಮೇಲ್ಮೈ ಸುಳಿಗಾಳಿ ಪರಿಣಾಮದಿಂದಾಗಿ ಕರ್ನಾಟಕದ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇಂದಿನಿಂದ ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ದಾವಣಗೆರೆ, ಬಳ್ಳಾರಿ, ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ.

ಬ್ಯಾಂಕೂ ಮುಗ್ಧ ಗ್ರಾಹಕರೂ (ಬ್ಯಾಂಕರ್ಸ್ ಡೈರಿ)

ಇಂದು ಮತ್ತು ನಾಳೆ ಗದಗ, ಕಲಬುರ್ಗಿ, ಹಾವೇರಿ, ಧಾರವಾಡ, ಚಿತ್ರದುರ್ಗ, ತುಮಕೂರು, ದಾವಣಗೆರೆ, ಕೋಲಾರ, ರಾಮನಗರ, ಚಾಮರಾಜನಗರ, ಮೈಸೂರು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

Share This Article
Leave a comment