ರಾಜ್ಯದ ಹಲವೆಡೆ ಇಂದಿನಿಂದ 4 ದಿನಗಳ ಕಾಲ ಭಾರೀ ಮಳೆ

Team Newsnap
1 Min Read

ರಾಜ್ಯದ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ವರುಣಾರ್ಭಟ ಮುಂದುವರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನಿಡಿದೆ.

ಇನ್ನು ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ದಕ್ಷಿಣ ಒಳನಾಡಿನ ಮಲೆನಾಡು ಭಾಗದ ಕೊಡಗು, ಶಿವಮೊಗ್ಗ, ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.ಕರಾವಳಿ ಪ್ರದೇಶಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ ಹಾವೇರಿ ಜಿಲ್ಲೆಗಳಿಗೆ ಆರೆಂಜ್, ಧಾರವಾಡ , ಕಲಬುರಗಿ , ರಾಯಚೂರು ಹಾಗೂ ಗದಗ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕ್ನನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಮೂರನೇ ದಿನವಾದ ಇಂದು ಕೂಡ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ಮತ್ತು ಶುಕ್ರವಾರ ಮೊಡಕವಿದ ವಾತಾವರಣ ಇರಲಿದ್ದು, ಗುಡುಗು ಮಿಂಚಿನ ಸಮೇತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Share This Article
Leave a comment