ಬೆಂಗಳೂರು, ನವೆಂಬರ್ 26: ಕರ್ನಾಟಕದಲ್ಲಿ ಚಳಿ ಆರಂಭವಾದ ಬಳಿಕ ಮಳೆಯ ಪ್ರಮಾಣ ಕಡಿಮೆಯಾಗಿದೆ ಎಂಬಂತೆ ಕಾಣುತ್ತಿದ್ದರೂ, ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು ಕೇಂದ್ರವು ಮಹತ್ವದ ಮುನ್ಸೂಚನೆ ನೀಡಿದ್ದು, ಮತ್ತೆ ಮಳೆಯಾಗುವ ಸಾಧ್ಯತೆಯ ಬಗ್ಗೆ ಎಚ್ಚರಿಸಿದೆ.
ಸಮುದ್ರಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ, ರಾಜ್ಯದ ಹಲವು ಭಾಗಗಳಲ್ಲಿ ಡಿಸೆಂಬರ್ 4ರವರೆಗೆ ಭಾರೀ ಮಳೆಯಾಗುವ ಲಕ್ಷಣಗಳಿವೆ ಎಂದು ತಿಳಿಸಲಾಗಿದೆ.
ವಾಯುಭಾರ ಕುಸಿತದ ಪರಿಣಾಮ
ಹವಾಮಾನ ಇಲಾಖೆ ಪ್ರಕಾರ, ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸೃಷ್ಟಿಯಾಗಿದೆ. ಇದು ಮಂಗಳವಾರ ಬೆಳಿಗ್ಗೆ ತೀವ್ರ ಸ್ವರೂಪ ಪಡೆದು, ಪ್ರತಿ ಗಂಟೆಗೆ 12 ಕಿಮೀ ವೇಗದಲ್ಲಿ ವಾಯುವ್ಯ ದಿಕ್ಕಿಗೆ ಚಲಿಸಿದೆ. ಈ ವಾಯುಭಾರ ಕುಸಿತ ಮುಂದಿನ 24 ಗಂಟೆಗಳಲ್ಲಿ ಹೆಚ್ಚು ತೀವ್ರಗೊಂಡು, ನವೆಂಬರ್ 27ರ ಸಂಜೆ ಚಂಡಮಾರುತ ಸ್ಥಿತಿಗೆ ಬದಲಾಗುವ ಸಾಧ್ಯತೆಯಿದೆ.
ರಾಜ್ಯದ ಹವಾಮಾನದ ಸ್ಥಿತಿ
- ಮುಂದಿನ 24 ಗಂಟೆ: ರಾಜ್ಯದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ, ಕೆಲವು ಪ್ರದೇಶಗಳಲ್ಲಿ ಮಬ್ಬು ವಾತಾವರಣ ಮತ್ತು ಚಳಿ ಹೆಚ್ಚಾಗುವ ಲಕ್ಷಣ.
- ಮುಂದಿನ 48 ಗಂಟೆ: ಎರಡು ದಿನಗಳ ಕಾಲ ತಾಪಮಾನ ಗರಿಷ್ಠ 28°C ಮತ್ತು ಕನಿಷ್ಟ 19°C ನಡುವೆ ದಾಖಲಾಗುವ ಸಾಧ್ಯತೆ ಇದೆ.
ಡಿಸೆಂಬರ್ 4ರವರೆಗೆ ಭಾರೀ ಮಳೆಯ ಮುನ್ಸೂಚನೆ
ನವೆಂಬರ್ 28ರಿಂದ ಡಿಸೆಂಬರ್ 4ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಚಿಕ್ಕಮಗಳೂರು, ಹಾಸನ, ಕೊಡಗು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಚಳಿ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಹಗುರ ಮಳೆಯಾಗುವ ಲಕ್ಷಣಗಳಿವೆ.ಇದನ್ನು ಓದಿ -RBI ಗವರ್ನರ್ ಶಕ್ತಿಕಾಂತ ದಾಸ್ ಆಸ್ಪತ್ರೆಗೆ ದಾಖಲು: ಆರೋಗ್ಯದಲ್ಲಿ ಚೇತರಿಕೆ
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಸಲಹೆ ನೀಡಲಾಗಿದೆ.
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ