ಬೆಂಗಳೂರಿನಲ್ಲಿ ಭಾರಿ ಗಾಳಿ – ಮಳೆ : ಧರೆಗೆ ಉರುಳಿದ 8 ಮರಗಳು: ತಗ್ಗು ಪ್ರದೇಶದ ಮನೆಗಳಿಗೆ ನುಗ್ಗಿದ ನೀರು

Team Newsnap
1 Min Read

ಕೆಲ ದಿನಗಳಿಂದ ಸ್ವಲ್ಪ ಬಿಡುವು ನೀಡಿದ್ದ ವರುಣ ಮತ್ತೆ ನಿನ್ನೆ ರಾತ್ರಿ ತನ್ನ ಆರ್ಭಟವನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದುವರಿಸಿ ಭಾರಿ ಅವಾಂತರಗಳನ್ನು ಸೃಷ್ಠಿಸಿದ್ದಾನೆ.

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಸಾರ್ವಜನಿಕ ಆಸ್ತಿಪಾಸ್ತಿಗಳು ಹಾನಿಯಾಗಿವೆ.
ಬೆಂಗಳೂರಿನ ವಿವಿಧೆಡೆ 8 ಮರಗಳು ಧರೆಗುರುಳಿವೆ. ಕೆ.ಜಿ.ರಸ್ತೆಯಲ್ಲಿ ಬಿದ್ದಿದ್ದ ಬೃಹತ್ ಮರದಿಂದ ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿತ್ತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

ಪ್ರಶಾಂತ್ ನಗರ, ಶೋಭಾ ಆಸ್ಪತ್ರೆ ಬಳಿ, ಶ್ರೀರಾಂಪುರ, ಕೆ.ಜಿ.ರಸ್ತೆ ಗಾಂಧಿನಗರ, ಲಿಂಕ್ ರೋಡ್ ಮಲ್ಲೇಶ್ವರ, ಸುಬ್ರಮಣ್ಯನಗರ ಹಾಗೂ ರಾಜಾಜೀನಗರದಲ್ಲಿ ತಲಾ ಒಂದೊಂದು ಮರಗಳು ನೆಲಕಚ್ಚಿದ್ದವು. ಹಲವೆಡೆ ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥಗೊಂಡಿತ್ತು. 

ಉತ್ತರಹಳ್ಳಿ, ಕೆ.ಪಿ.ಅಗ್ರಹಾರ ಫಿಶ್ ಮಾರ್ಕೆಟ್ ಬಳಿ ಮನೆಗೆ ನೀರು ನುಗ್ಗಿದ್ದ ದೃಶ್ಯಗಳು ಕಂಡುಬಂದವು.

ಸಂಗೋಳ್ಳಿ ರಾಯಣ್ಣ ರೈಲ್ವೆ ಅಂಡರ್ ಪಾಸ್ ಸಂಪೂರ್ಣ ಜಲಾವೃತವಾಗಿತ್ತು. ಪೈಪ್‌ಲೈನ್ ರಸ್ತೆ ಮಲ್ಲೇಶ್ವರಂ ಬಳಿ ಮನೆಗೆ ನುಗ್ಗಿದ ನೀರು ಸಂಪೂರ್ಣ ತೆರವುಗೊಳಿಸುವಲ್ಲಿ ತಡರಾತ್ರಿ ಕಳೆದಿತ್ತು.

Share This Article
Leave a comment