ಕೊಡಗಿನಲ್ಲಿ ಭಾರಿ ಮಳೆ : ಭಾಗಮಂಡಲ ಜಾಲಾವೃತ: ಹಾರಂಗಿ ಭರ್ತಿ: KRS ಗೆ 8000 ಅಧಿಕ ಕ್ಯುಸೆಕ್ ನೀರು

Team Newsnap
1 Min Read

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ ಇದರಿಂದಾಗಿ ಭಾಗಮಂಡಲದಲ್ಲಿರುವ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಕಾವೇರಿ ನದಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.

ಬ್ರಹ್ಮಗಿರಿ ಬೆಟ್ಟ ಭಾಗದಲ್ಲಿ ಎಡಬಿಡದೆ ಮಳೆಯಾಗುತ್ತಿದೆ ಕಾವೇರಿ ನದಿ ನೀರಿನ ಮಟ್ಟ ಗಣನೀಯ ಏರಿಕೆಯಾಗಿದೆ. ಈಗ ಸಂಗಮ ಭರ್ತಿಯಾಗಿ ನಾಪೋಕ್ಲು ರಸ್ತೆ ಮೇಲೆ ನೀರು ಹರಿಯುತ್ತಿದೆ.

ಮಳೆ ಹೀಗೆ ಮುಂದುವರಿದರೆ ಇನ್ನಷ್ಟು ನೀರಿನ ಮಟ್ಟ ಹೆಚ್ಚಳವಾಗಲಿದೆ
ನಾಪೋಕ್ಲು ಭಾಗಮಂಡಲ ರಸ್ತೆ ಸಂಪರ್ಕ ಕಡಿತವಾಗುವ ಸಾಧ್ಯತೆಯಿದೆ. 

ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ, ಪೊನ್ನಂಪೇಟೆಯಲ್ಲಿ ಭಾರೀ ಮಳೆಯಾಗುತ್ತಿದೆ. ಹಾರಂಗಿ ಜಲಾಶಯ ಭರ್ತಿಯಾಗಿದೆ ಶನಿವಾರ ಶಾಸಕ ಅಪ್ಪಚ್ಚು ರಂಜನ್‌ ಬಾಗಿನ ಅರ್ಪಿಸಿದ್ದಾರೆ. 1,200 ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿದೆ.

K R S ಗೆ 8000ಕ್ಕೂ ಅಧಿಕ ಕ್ಯುಸೆಕ್ ಒಳ ಹರಿವು :

ಕೊಡಗಿನಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆ ಆರ್ ಎಸ್ ಗೆ 8769 ಕ್ಯುಸೆಕ್ ನೀರು ಒಳಹರಿವಿದೆ

ನೀರಿನ ಮಟ್ಟ :

ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 108.82 ಅಡಿ
ಒಳ ಹರಿವು -8769 ಕ್ಯುಸೆಕ್
ಹೊರ ಹರಿವು – 1168 ಕ್ಯುಸೆಕ್

Share This Article
Leave a comment