ಬೆಂಗಳೂರು, ಡಿಸೆಂಬರ್ 16:ಕಳೆದ ಕೆಲವು ದಿನಗಳಿಂದ ತಣ್ಣಗಿದ್ದ ವಾತಾವರಣ ಮತ್ತೆ ಬದಲಾವಣೆ ಕಂಡು, ಮಳೆರಾಮ ತನ್ನ ಹಳೇ ಶಕ್ತಿ ಪ್ರದರ್ಶಿಸುತ್ತಿದ್ದಾನೆ. ಮುಂದಿನ 48 ಗಂಟೆಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ:
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ, ಕರ್ನಾಟಕದ ಹಲವೆಡೆ ಮಳೆಯು ಮುಂದುವರಿಯಲಿದೆ. ಇಂದು ಬೆಳಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಧ್ಯಾಹ್ನದ ನಂತರ ಮಳೆಯು ಚುರುಕಾಗುವ ಸಾಧ್ಯತೆ ಇದೆ.
ಮಳೆಯಾಗುವ ಜಿಲ್ಲೆಗಳ ಪಟ್ಟಿ:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ.ಇದನ್ನು ಓದಿ –ಅಹಂಕಾರ , ಒಣಜಂಭ ಬೇಡ
ಹವಾಮಾನ ಇಲಾಖೆ ಪ್ರಕಾರ, ರೈತರು ಹಾಗೂ ಸಾರ್ವಜನಿಕರು ಈ ಮಳೆಯ ಬಗ್ಗೆ ಜಾಗರೂಕರಾಗಿರಬೇಕು ಮತ್ತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ