ಬೆಂಗಳೂರು : ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ಅಕ್ಟೋಬರ್ 10 ರಿಂದ 13ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 13 ರವರೆಗೆ ಗುಡುಗು-ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಕ್ಟೋಬರ್ 12 ರವರೆಗೆ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಲಾಗಿದೆ.
ಮುಂಬರುವ ದಿನಗಳಲ್ಲಿ ಮಳೆಯ ಎಚ್ಚರಿಕೆ:
ಈ ಸಂದರ್ಭದಲ್ಲಿ, ಬೆಂಗಳೂರಿನಲ್ಲಿ ಬುಧವಾರ ರಾತ್ರಿಯಿಂದಲೇ ಮಳೆಯು ಆರಂಭವಾಗಿದೆ. ಹವಾಮಾನ ಇಲಾಖೆ ರಾಜ್ಯದ ವಿವಿಧ ಜಿಲ್ಲೆಗಳಿಗೆ, ಅಂದರೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಮುಂದಿನ ವಾರವೂ ಮಳೆಯ ಅಬ್ಬರ:
ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಹಲವು ಭಾಗಗಳಲ್ಲಿ, ಬೆಂಗಳೂರನ್ನು ಒಳಗೊಂಡು, ಮುಂದಿನ ವಾರಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ದಾವಣಗೆರೆ, ವಿಜಯನಗರ, ಮಂಡ್ಯ, ಮೈಸೂರು, ಹಾಸನ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಇದನ್ನು ಓದಿ –ಖ್ಯಾತ ಉದ್ಯಮಿ ರತನ್ ಟಾಟಾ (Ratan Tata) ಇನ್ನಿಲ್ಲ
ಇದೇ ವೇಳೆ, ಕೆಲವು ಭಾಗಗಳಲ್ಲಿ ಭಾರೀ ಮಳೆಯೂ ಆಗಲಿದೆ, ಉಡುಪಿ, ಧಾರವಾಡ, ಕಾರವಾರ, ಮತ್ತು ಕೊಡಗು ಸೇರಿದಂತೆ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ.
More Stories
ಬೊಲೆರೋ ಡಿಕ್ಕಿಯಿಂದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ
ಗೃಹಲಕ್ಷ್ಮಿ ಯೋಜನೆ ಸ್ಥಗಿತ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇತಿಹಾಸ ಸೃಷ್ಟಿಸಲಿದೆ: ಸಚಿವ ಚಲುವರಾಯಸ್ವಾಮಿ