ಭಾರಿ ಮಳೆ ಅವಾಂತರ – ಕಾವೇರಿ ನದಿ ಪಾತ್ರ ಜನರಿಗೆ ಎಚ್ಚರಿಕೆ

Team Newsnap
1 Min Read

ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದ್ದು, ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಸಾಧ್ಯತೆ ಇದೆ

ನವೆಂಬರ್ 2 ರಂದು ಕೆಆರ್‌ಎಸ್‌ ಭರ್ತಿಯಾಗಿದ್ದ ಹಿನ್ನೆಲೆ ಕೆಆರ್‌ಎಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದ ಕೆಆರ್‌ಎಸ್‌ ಭರ್ತಿಯಾಗಿಯೇ ಉಳಿದಿದೆ.

ಮುಂದಿನ ದಿನಗಳಲ್ಲಿ ಅಪಾರ ಪ್ರಮಾಣದ ಮಳೆ ಬಿದ್ದರೆ ಡ್ಯಾಂನಿಂದ ನದಿಗೆ ಅಧಿಕ ಪ್ರಮಾಣದಲ್ಲಿ ನೀರು ಹರಿಸುವ ಸಾಧ್ಯತೆ ಇದೆ. ಹೀಗಾಗಿ ನದಿ ಪಾತ್ರದ ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಆದೇಶಿಸಲಾಗಿದೆ. ಅಲ್ಲದೇ ಶ್ರೀರಂಗಪಟ್ಟಣದ ನಿಮಿಷಾಂಭ ದೇವಸ್ಥಾನದ ಬಳಿ ಸ್ನಾನ ಮಾಡಲು ಭಕ್ತರು ಕಾವೇರಿ ನದಿಗೆ ಇಳಿಯದಂತೆ ಸೂಚಿಸಲಾಗಿದೆ.

124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಕೆಆರ್‌ಎಸ್‌ ಸಂಪೂರ್ಣ ಭರ್ತಿಯಾಗಿದೆ
ಡ್ಯಾಂಗೆ 17,135 ಕ್ಯೂಸೆಕ್ ನೀರು ಒಳಹರಿವು , 18,469 ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡಲಾಗುತ್ತಿದೆ.

Share This Article
Leave a comment