ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮಂಡ್ಯ, ರಾಮನಗರ, ಶಿವಮೊಗ್ಗ ,ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೇ 13ರ ಸೋಮವಾರ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 14ರಂದು ಹೆಚ್ಚಿನ ಮಳೆ ಸಂಭವ ಇರುವುದರಿಂದ ದಕ್ಷಿಣ ಕನ್ನಡ, ಬೆಳಗಾವಿ, ಉಡುಪಿ, ಧಾರವಾಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು
ಎಲ್ಲಾ ಜಿಲ್ಲೆಗಳಲ್ಲಿಯೂ ಮೇ 15ರಂದು ಭಾರಿ ಮಳೆಯಾಗುವ ಸಂಭವ ಇದೆ ಎಂದು ಸೂಚಿಸಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು