ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಹಾನಿಗೀಡಾದ ಪ್ರತಿ ಕುಟುಂಬಕ್ಕೆ ಸಿ ಎಂ ಬಿಎಸ್ ಯಡಿಯೂರಪ್ಪ ತಲಾ 25 ಸಾವಿರ ರು ಪರಹಾರ ನೀಡುವುದಾಗಿ ಘೋಷಿಸಿದ್ದಾರೆ.
ಸಿಎಂ ಯಡಿಯೂರಪ್ಪ ಬಿಬಿಎಂಪಿ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಬಗ್ಗೆ, ಸಂತ್ರಸ್ತರಿಗೆ ನೆರವು ಒದಗಿಸುವ ಕುರಿತಂತೆ ಸಮಾಲೋಚನೆ ಮಾಡಿದರು.
ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡವರಿಗೆ, ಮನೆ ಕಳೆದುಕೊಂಡವರಿಗೆ ಪರಿಹಾರ ಹಾಗೂ ಆಹಾರ ಪದಾರ್ಥಗಳ ವಿತರಣೆ ಬಗ್ಗೆ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.
ಈ ಸಭೆಯಲ್ಲಿ ಕಂದಾಯ ಸಚಿವ ಆರ್ ಅಶೋಕ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್, ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಭಾಗಿಯಾಗಿದ್ದರು. ಮಳೆಯಿಂದ ಹಾನಿಗೊಳಗಾದವರಿಗೆ ಸ್ಥಳದಲ್ಲೇ 25 ಸಾವಿರ ರೂ.ಚೆಕ್ ವಿತರಣೆ ಮಾಡಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ಮತ್ತು ನಾಳೆ ಸಹ ಬಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವುದರಿಂದ ಕಟ್ಟೆಚ್ಚರವಾಗಿ ಇರುವಂತೆ ಸಿಎಂ ಬಿಎಸ್ವೈ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಳೆಯಿಂದ ಅವಾಂತರ ಹಿನ್ನೆಲೆಯಲ್ಲಿ, ಮಳೆಪೀಡಿತ ಪ್ರದೇಶಗಳಿಗೆ ಸಿಎಂ ಬಿಎಸ್ವೈ ಭೇಟಿ ನೀಡಲು ಮುಂದಾಗಿದ್ದಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಲು ಸಿಟಿ ರೌಂಟ್ ನಡೆಸಲು ನಿರ್ಧಾರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆಗಿರುವ ಮಳೆ ಹಾನಿ ಬಗ್ಗೆ ಸಿಎಂ ಬಿಎಸ್ವೈ ಸಚಿವರಿಂದ ಮಾಹಿತಿ ಪಡೆದಿದ್ದಾರೆ.
ಎಲ್ಲೆಲ್ಲಿ ಮಳೆ ಸುರಿದಿದೆ, ಅಲ್ಲಿ ಮಳೆಯಿಂದ ಯಾವ ರೀತಿ ಅವಾಂತರ ಸೃಷ್ಟಿ ಯಾಗಿದೆ, ಮಳೆಯಿಂದ ಹಾನಿಯಾಗಿರುವ ಪ್ರಮಾಣ, ನಿರಾಶ್ರಿತರ ಪರಿಸ್ಥಿತಿ, ನಿರಾಶ್ರಿತರಿಗೆ ಒದಗಿಸುವ ಸೌಲಭ್ಯ ಹಾಗೂ ಮುಂದೆ ಏನು ಕ್ರಮ ಮಾಡಬೇಕು ಎಂಬುದರ ಬಗ್ಗೆ ಸಿಎಂ ಅಧಿಕಾರಿಗಳು ಮತ್ತು ಸಚಿವರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ.
https://kannada.thenewsnap.com/heavy-rain-in-bengaluru-break-for-festival-happiness/
- ಜಲಗಾರ ಮತ್ತು ಕಾಲ ಜ್ಞಾನಿ ಕನಕ ನಾಟಕಗಳಲ್ಲಿ ದೈವ-ದೇಗುಲ ಸಂಕಥನ
- ಡ್ರಗ್ಸ್ ಕೇಸ್ ಹೆಸರಿನಲ್ಲಿ ಟೆಕಿಗೆ 40 ಲಕ್ಷ ವಂಚನೆ
- ಮೈಸೂರು BEML ಅಧಿಕಾರಿ ಆತ್ಮಹತ್ಯೆ ಗೆ ಶರಣು
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ