ರಾಷ್ಟ್ರ ರಾಜಧಾನಿಯಲ್ಲಿ ಶನಿವಾರ ಬೆಳಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಕೆರೆಯಂತಾಗಿದೆ.
ಧಾರಕಾರ ಮಳೆ ಹಿನ್ನೆಲೆ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ವಿಮಾನಗಳ ಹಾರಾಟಕ್ಕೆ ತೊಂದರೆ ಉಂಟಾಗಿದೆ.
ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ನಾಲ್ಕು ಡೊಮೆಸ್ಟಿಕ್ ವಿಮಾನಗಳು ಮತ್ತು ಒಂದು ಅಂತರರಾಷ್ಟ್ರೀಯ ವಿಮಾನ ಮಾರ್ಗಗಳನ್ನ ಡೈವರ್ಟ್ ಮಾಡಲಾಗಿದೆ. ದೆಹಲಿಯಲ್ಲಿ ಲ್ಯಾಂಡ್ ಆಗಬೇಕಾಗಿದ್ದ ವಿಮಾನವನ್ನ ಜೈಪೂರ್ ಮತ್ತು ಅಹಮದಾಬಾದ್ ಗೆ ಡೈವರ್ಟ್ ಮಾಡಲಾಗಿದೆ.
ಅನಿರೀಕ್ಷಿತ ಮಳೆಯಿಂದ ಜನರಿಗೆ ತೊಂದರೆಯಾಗುತ್ತಿದೆ. ದೆಹಲಿ ವಿಮಾನ ನಿಲ್ದಾಣ ಪ್ರಾಧಿಕಾರ, ಕಾರ್ಯಾಚರಣೆ ಆರಂಭವಾಗಿದೆ. ಪ್ರಯಾಣಕ್ಕೆ ಅನಾನೂಕೂಲ ಉಂಟಾಗಿದ್ದಕ್ಕೆ ವಿಷಾದ ವ್ಯಕ್ತಪಡಿಸಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ