ಬೆಂಗಳೂರು, : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಆರಂಭವಾಗಿದೆ.
ರಾಜ್ಯದ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ಇಂದಿನಿಂದ ಮುಂದಿನ 5 ದಿನಗಳಲ್ಲಿ ಹಲವಾರು ಜಿಲ್ಲೆಗಳಲ್ಲಿ ಗರಿಷ್ಠ 110 ಮಿಲಿಮೀಟರ್‌ಗೂ ಅಧಿಕ ಮಳೆ ನಿರೀಕ್ಷಿಸಲಾಗಿದೆ.
ರಾಜ್ಯದಾದ್ಯಂತ ಮಳೆದ ವಾತಾವರಣವನ್ನು ಕಾಣಬಹುದು. ಕಳೆದ ವಾರ , ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆ ಸುರಿಯುತ್ತಿತ್ತು, ಆದರೆ ಈಗ ದಕ್ಷಿಣ ಕರ್ನಾಟಕ (ಒಳನಾಡು) ಭಾಗದಲ್ಲಿ ಮಳೆಯ ಅಬ್ಬರ ಶುರುವಾಗಿದೆ.
5 ದಿನಗಳಿಗೆ ಯೆಲ್ಲೋ ಅಲರ್ಟ್
ಮುಂದಿನ ಐದು ದಿನಗಳ ಕಾಲ ರಾಜ್ಯದ ವಿಭಿನ್ನ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ರಾಮನಗರ, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಡಗು ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಮೇಲಿನ ಜಿಲ್ಲೆಗಳಲ್ಲಿ ಕೆಲವೇ ಸ್ಥಳಗಳಲ್ಲಿ ದಿನ ಬಿಟ್ಟು ದಿನ ಮಳೆ ಬರಲಿದೆ. ಉಳಿದಂತೆ, ಕರಾವಳಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯ ಸಂಭವನೀಯತೆ ಇದೆ.
ರೈತರಿಗಾಗಿ ಸಕಾರಾತ್ಮಕ ಮಳೆ
ಮುಂದಿನ ಒಂದು ವಾರದಲ್ಲಿ ದಕ್ಷಿಣ ಕರ್ನಾಟಕ ಭಾಗಗಳಲ್ಲಿ ಮಳೆ ತೀವ್ರವಾಗಿರುವ ಸಾಧ್ಯತೆ ಇದೆ, ಇದರ ಪರಿಣಾಮವಾಗಿ ಸರೋವರಗಳು ಮತ್ತು ನದಿಗಳು ತುಂಬಿ ಹರಿಯುತ್ತವೆ.ರಾಜ್ಯದ ಜಲಾಶಯಗಳು ಈಗಾಗಲೇ ತುಂಬಿರುವುದರಿಂದ, ರೈತರಿಗೆ ಹಿಂಗಾರು ಬಿತ್ತನೆಗೆ ಸಹಾಯವಾಗುವ ಸಾಧ್ಯತೆಯಿದೆ.
ಮಳೆಯ ವರದಿ
ಕಳೆದ 24 ಗಂಟೆಗಳಲ್ಲಿ ಕೊಪ್ಪಳ ಮತ್ತು ವಿಜಯನಗರದಲ್ಲಿ 40 ಮಿಲಿಮೀಟರ್ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ, ಕಲಬುರಗಿ ಮತ್ತು ವಿಜಯಪುರದಲ್ಲಿ 30 ಮಿಲಿಮೀಟರ್, ಬೋಗರೂರು ಮತ್ತು ಮಾಗಡಿಯಲ್ಲಿಯೂ 20 ಮಿಲಿಮೀಟರ್ ಮಳೆಯ ದಾಖಲೆವಾಗಿದೆ. ಉತ್ತರ ಕನ್ನಡ, ಗದಗ, ತುಮಕೂರು, ಬೆಂಗಳೂರು ನಗರ, ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಎಂದು ಐಎಂಡಿ ವರದಿ ನೀಡಿದೆ.ಇದನ್ನು ಓದಿ –ಟೊಮೆಟೊ ದರದಲ್ಲಿ ಭಾರಿ ಏರಿಕೆ: 1 ಕೆಜಿಗೆ 80 ರೂ.
ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಕಂಡು ಬರಲಿದೆ.
More Stories
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು