ಮಹಾರಾಷ್ಟ್ರದಲ್ಲಿ ಭಾರಿ‌ ಮಳೆ : ರಾಜ್ಯದಲ್ಲಿ ವರುಣನ ರೌದ್ರಾವತಾರಕ್ಕೆ 6 ಮಂದಿ ಬಲಿ

Team Newsnap
1 Min Read

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಜಲ ಕಂಟಕ ಎದುರಾಗಿದೆ.

ಈಗಾಗಲೇ ಭಾರೀ ಮಳೆಗೆ ರಾಜ್ಯದಲ್ಲಿ ಒಟ್ಟು 6 ಮಂದಿ ಬಲಿಯಾಗಿದ್ದಾರೆ.
ಉತ್ತರ ಕನ್ನಡದಲ್ಲಿ 2 ಬೆಳಗಾವಿಯಲ್ಲಿ 2 ಮಹಾಮಳೆಗೆ ಬಲಿಯಾಗಿದ್ದಾರೆ. ಹಾಗೆಯೇ ಚಿಕ್ಕಮಗಳೂರು, ದಾವಣಗೆರೆಯಲ್ಲಿ ಮಳೆಗೆ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿಯಲ್ಲಿ ಪ್ರವಾಹ ಉಂಟಾಗಿದೆ, ನದಿ, ಹಳ್ಳ, ಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಗ್ರಾಮಗಳು ಜಲಾವೃತಗೊಂಡಿವೆ. ದೇಗುಲ, ಮನೆಗಳು ಮುಳುಗಡೆಯಾಗಿವೆ. ಹಳ್ಳಿಗಳು ದ್ವೀಪದಂತಾಗಿ ಜನ ಪರದಾಡುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಕುಂಭದ್ರೋಣ ಮಳೆ ಕಾರಣ ಕೊಯ್ನಾ, ರಾಧಾನಗರಿ, ಕಳಂಬ ಡ್ಯಾಂಗಳಿಂದ ರಾಜ್ಯಕ್ಕೆ ಹರಿದುಬರ್ತಿರುವ ನೀರಿನಿಂದ ಇಡೀ ಬೆಳಗಾವಿ ಜಿಲ್ಲೆ ಹೆಚ್ಚು ಕಡಿಮೆ ಜಲದಿಗ್ಬಂಧನದಲ್ಲಿ ಸಿಲುಕಿದೆ. ಜನಜೀವನ ಅಸ್ತವ್ಯಸ್ತವಾಗಿದೆ.

ಮಳೆ ಪ್ರಮಾಣ ಹೆಚ್ಚಾದ ಹಿನ್ನೆಲೆ ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡು ಮತ್ತೆ ಮಹಾಪ್ರವಾಹದ ಭೀತಿ ಎದುರಾಗಿದೆ. ವೇದಗಂಗಾ ನದಿ ಪ್ರವಾಹಕ್ಕೆ ನಿಪ್ಪಾಣಿ ತಾಲೂಕು ಸಿಲುಕಿದೆ. ಇಲ್ಲಿನ ಕೊಡಣಿ ಗ್ರಾಮ ಸಂಪೂರ್ಣ ಜಲಾವೃತಗೊಂಡಿದೆ. ಈ ಕೊಡಣಿ ಗ್ರಾಮದಲ್ಲಿ ಸಿಲುಕಿದ್ದ 200 ಜನರನ್ನು ರಕ್ಷಣೆ ಮಾಡಲಾಗಿದೆ.

Share This Article
Leave a comment