ರಾಜ್ಯದಲ್ಲಿ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆ ಆರ್ಭಟ ಮತ್ತೆ ಶುರುವಾಗಲಿದೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುತ್ತಿದೆ, ಹಲವಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ.
ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಇಂದು ಮತ್ತು ನಾಳೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ , ಆಗಸ್ಟ್ 23 ರಿಂದ ಮೂರು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಭೀಕರ ಅಪಘಾತ – ನವ ವಿವಾಹಿತೆ ಸ್ಥಳದಲ್ಲೇ ಸಾವು, ಪತಿ ಗಂಭೀರ
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 24 ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
More Stories
BCCI ನೂತನ ಕಾರ್ಯದರ್ಶಿಯಾಗಿ ದೇವಜಿತ್ ಸೈಕಿಯಾ ಆಯ್ಕೆ
ಹುಟ್ಟುಹಬ್ಬದ ದಿನವೇ ಬಾಲಕನ ದುರ್ಮರಣ
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ