February 22, 2026

Newsnap Kannada

The World at your finger tips!

varun sing

ಹೆಲಿಕಾಪ್ಟರ್ ದುರಂತ: ಗಾಯಗೊಂಡಿದ್ದ ಗ್ರೂಪ್​ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

Spread the love

ಹೆಲಿಕಾಪ್ಟರ್​ ದುರಂತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ರೂಪ್​ ಕ್ಯಾಪ್ಟನ್​ ವರುಣ್ ಸಿಂಗ್ ಚಿಕಿತ್ಸೆ ಫಲಿಸದೇ ನಿಧನರಾದರು

ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ವರುಣ್​ ಸಿಂಗ್​ಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಡಿಸೆಂಬರ್ 8 ರಂದು ತಮಿಳುನಾಡಿನ ಕೂನೂರಿನಲ್ಲಿ ಸಿಡಿಎಸ್​ ಬಿಪಿನ್ ರಾವತ್ ಇದ್ದ ಹೆಲಿಕಾಪ್ಟರ್ ಪತನಗೊಂಡಿತ್ತು. ಪರಿಣಾಮ ಹೆಲಿಕಾಪ್ಟರ್​ನಲ್ಲಿದ್ದ 13 ಮಂದಿ ಅಂದೇ ಸಾವನ್ನಪ್ಪಿದ್ದರು. ಈ ಅಪಘಾತದಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಬದುಕುಳಿದಿದ್ದರು.

ಗಂಭೀರವಾಗಿ ಗಾಯಗೊಂಡಿದ್ದ ಅವರನ್ನ ತಮಿಳುನಾಡಿನ ವೆಲ್ಲಿಂಗ್ಟನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಬರಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎಂದು ಸೇನೆ ತಿಳಿಸಿದೆ. ಹೀಗಾಗಿ ಬಿಪಿನ್ ರಾವತ್ ಬಲಿ ಪಡೆದ ಹೆಲಿಕಾಪ್ಟರ್​ ದುರಂತದಲ್ಲಿದ್ದ ಎಲ್ಲಾ 14 ಮಂದಿಯೂ ಸಾವನ್ನಪ್ಪಿದ್ದಾರೆ.

error: Content is protected !!