6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಹೆಲ್ಮೆಟ್ ಕಡ್ಡಾಯ

Team Newsnap
1 Min Read

ಬೆಂಗಳೂರು : ಗಾಡಿಯಲ್ಲಿ ಚಾಲಿಸುವಾಗ 6 ವರ್ಷ ಮೇಲ್ಪಟ್ಟ ಮಕ್ಕಳಿಗೆ ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಎಂದು ಪೊಲೀಸ್ ಇಲಾಖೆ ಸೂಚಿಸಿದೆ.

ಪೋಷಕರು ಮಕ್ಕಳನ್ನು ಶಾಲೆಗೆ (School) ಕರೆದುಕೊಂಡು ಬರುವಾಗ ಮಕ್ಕಳಿಗೆ ಅಲ್ಲದೇ ತಾವು ಕೂಡ ಹೆಲ್ಮೆಟ್ ಧರಿಸದೇ ಬರುತ್ತಿದ್ದಾರೆ.

ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿ ನಿಗದಿತ ಮಕ್ಕಳಿಗಿಂತ ಹೆಚ್ಚಿನ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಾಕಷ್ಟು ದೂರುಗಳು ಬಂದಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

ಪೋಷಕರು ಮಕ್ಕಳನ್ನು ಶಾಲೆಗೆ ಬಿಡಲು ಬರುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಹಾಗೆಯೇ 6 ವರ್ಷ ಮೇಲ್ಪಟ್ಟ ಮಕ್ಕಳು ಸಹ ಇನ್ಮುಂದೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.

ನಿಗದಿತ ಮಿತಿಗಿಂತ ಹೆಚ್ಚಿನ ಮಕ್ಕಳನ್ನು ಶಾಲಾ ಅಟೋ, ಖಾಸಗಿ ಕಾರು, ಟಿಟಿ ವಾಹನಗಳಲ್ಲಿಶಾಲೆಗೆ ಕರೆದೊಯ್ಯುವವರು ಮತ್ತು ಮೂರಕ್ಕೂ ಹೆಚ್ಚು ಮಕ್ಕಳನ್ನು ಗಾಡಿಯಲ್ಲಿ ಕರೆದುಕೊಂಡು ಹೋಗುವ ಪೋಷಕರ ವಿರುದ್ಧವೂ ಕ್ರಮಕೈಗೊಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ .

ಈ ನಿರ್ಧಾರವನ್ನು ಪೊಲೀಸ್ ಇಲಾಖೆಯು ಸಾಕಷ್ಟು ದೂರುಗಳು ಬಂದ ಹಿನ್ನೆಲೆಯಲ್ಲಿ ತೆಗೆದುಕೊಂಡಿದೆ .ಶೀಘ್ರದಲ್ಲೇ ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆ

ಸಾರ್ವಜನಿಕರಿಗೆ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ ಎಚ್ಚರಿಸಿದ್ದು, ಶಾಲೆಗಳ ಬಳಿ ಸ್ಪೆಷಲ್ ಡ್ರೈವ್‌ ಮಾಡಲು ಟ್ರಾಫಿಕ್ ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.

Share This Article
Leave a comment