ಆಗಸ್ಟ್ 23 ರಿಂದ ರಾಜ್ಯದಾದ್ಯಂತ ಶಾಲೆಗಳು ಆರಂಭಕ್ಕೂ ಮುನ್ನ
ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಆಗಸ್ಟ್ 23 ರಿಂದ ರಾಜ್ಯಾದ್ಯಂತ 9 ಮತ್ತು 10ನೇ ತರಗತಿ ಮಕ್ಕಳಿಗೆ ಶಾಲೆ ಆರಂಭವಾಗಲಿದೆ.
- ನಿತ್ಯ ಅರ್ಧ ದಿನ ಮಾತ್ರ ತರಗತಿ ಇರುತ್ತದೆ.
- ಸೋಮವಾರ ದಿಂದ ಶುಕ್ರವಾರ 10 ರಿಂದ 1.30 ತರಗತಿ ಮಾಡಬೇಕು
- ಶನಿವಾರ 10 ರಿಂದ 12.50 ವರೆಗೆ ಕ್ಲಾಸ್ ಮಾಡಬೇಕು,
- ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿ ಶಾಲೆಗಳಲ್ಲಿ ಮಾಡಬೇಕು.
- ಮಕ್ಕಳು ಮನೆಯಿಂದ ನೀರು, ಉಪಹಾರ ತರಲು ಅವಕಾಶ
- ಶಾಲೆಗಳಲ್ಲಿ ಕುಡಿಯುವ ಬಿಸಿ ನೀರು ವ್ಯವಸ್ಥೆ ಮಾಡಬೇಕು.
- ಹಾಜರಾತಿ ಕಡ್ಡಾಯ ಅಲ್ಲ, ಆನ್‍ಲೈನ್ ನಲ್ಲಿ ಬೇಕಾದರು ಕೂಡ ಹಾಜರಾತಿ ಆಗಬಹುದು.
- ಒಂದು ತಂಡದಲ್ಲಿ 15-20 ವಿದ್ಯಾರ್ಥಿಗಳು ಮಾತ್ರ ಇರಬೇಕು.
- ವಿದ್ಯಾರ್ಥಿಗಳು ಪೆನ್ನು, ಪುಸ್ತಕ, ರಬ್ಬರ್ ಸೇರಿದಂತೆ ಯಾವ ವಸ್ತುಗಳನ್ನು ಹಂಚಿಕೊಳ್ಳಬಾರದು.
- ನಿತ್ಯ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ ಥರ್ಮಲ್ ಸ್ಕ್ಯಾನಿಂಗ್ ಮಾಡಿ ತಾಪಮಾನ ಪರಿಶೀಲನೆ ಮಾಡಬೇಕು.
- ಡೆಸ್ಕ್ ನಲ್ಲಿ ಕೂರಿಸುವುದು, ವಿದ್ಯಾರ್ಥಿಯಗಳ ಆಗಮನ ಮತ್ತು ನಿರ್ಗಮದ ವೇಳೆ ಶಾಲಾ-ಕಾಲೇಜುಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು.
- ಶಾಲಾ-ಕಾಲೇಜು ಕೊಠಡಿಗಳು, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಸಮರ್ಪಕವಾಗಿ ಮಾಡಬೇಕು.
- ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸ್ಯಾನಿಟೈಸ್ ವ್ಯವಸ್ಥೆ ಶಾಲಾ-ಕಾಲೇಜುಗಳಲ್ಲಿ ಮಾಡಬೇಕು.
- ಆರೋಗ್ಯ ವ್ಯತ್ಯಾಸ ಇರೋ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಶಾಲೆ ಪ್ರವೇಶ ಇಲ್ಲ.
- ಪ್ರಾರ್ಥನೆ ಸಮಯ, ಊಟದ ಸಮಯದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕ್ರಮವಹಿಸಬೇಕು.
- ಗುಂಪು ಕ್ರೀಡೆಗಳ ಆಯೋಜನೆ ಮಾಡುವಾಗ ಎಚ್ಚರವಹಿಸಬೇಕು. ಕಾಲೇಜುಗಳಲ್ಲಿ ಸ್ವಿಮ್ಮಿಂಗ್ ಪೂಲ್ ಇದ್ದರೆ ಕಡ್ಡಾಯವಾಗಿ ಅದನ್ನು ಕ್ಲೋಸ್ ಮಾಡಬೇಕು.
- ಶಾಲಾ-ಕಾಲೇಜು ಕ್ಯಾಂಪಸ್ ಗೆ ಸಾರ್ವಜನಿಕ ನಿಷೇಧ ಹೇರಬೇಕು. ವಿದ್ಯಾರ್ಥಿಗಳು ಲೈಬ್ರರಿಗಳಲ್ಲಿ ಕುಳಿತು ಓದಲು ನಿಷೇಧ.
- ಪುಸ್ತಕ ಪಡೆದು ಮನೆಯಲ್ಲಿ ಓದುವ ನಿಯಮ ಪಾಲನೆ ಮಾಡಬೇಕು.
- ಶಾಲಾ-ಕಾಲೇಜುಗಳ ಹಂತದ ಕ್ರೀಡಾ ಕೂಟಗಳ ಆಯೋಜನೆ ಮಾಡಬಾರದು.
- ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಬಿಡುಗಡೆ
- ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
- ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
- ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ
- ಡಿ.ಕೆ. ಸುರೇಶ್ ತಂಗಿ ಎಂದು ಹೇಳಿಕೊಂಡು 8.41 ಕೋಟಿ ಚಿನ್ನಾಭರಣ ವಂಚನೆ: ಎಫ್ಐಆರ್ ದಾಖಲು
More Stories
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
ಸಿ.ಟಿ. ರವಿ ಪ್ರಕರಣ CID ಗೆ ಹಸ್ತಾಂತರ: ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ
ಶಾಲಾ ಕೊಠಡಿಯಲ್ಲಿ ಯುವತಿಯ ಅತ್ಯಾಚಾರ: ಆರೋಪಿ ಬಂಧನ