ಬೆಂಗಳೂರು: ಹೊರರಾಜ್ಯದಿಂದ ಯುವತಿಯರನ್ನು ಕರೆಸಿ ಬೆಂಗಳೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅನಿಲ್ ಕುಮಾರ್ ರೆಡ್ಡಿ ಎಂಬ ವ್ಯಕ್ತಿಯನ್ನು ಸಿಸಿಬಿ ಪೊಲೀಸರು (CCB Police) ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಅನಿಲ್ ಕುಮಾರ್ ರೆಡ್ಡಿ ಬಂಧಿತ ಆರೋಪಿ. ಈತ ಬೆಂಗಳೂರಿನ ಹಲವು ಸ್ಪಾಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದನು. ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ಯುವತಿಯರನ್ನು ಕರೆಸಿ, ಅವರ ಮೇಲೆ ಒತ್ತಾಯಪೂರ್ವಕವಾಗಿ ದಂಧೆ ಮಾಡಿಸುತ್ತಿದ್ದ ಎಂದು ತಿಳಿದುಬಂದಿದೆ. ಸದ್ಯ ಆರೋಪಿ ವಿರುದ್ಧ ಮಾನವ ಕಳ್ಳಸಾಗಣೆ ಸೇರಿ ಹಲವು ಗಂಭೀರ ಪ್ರಕರಣಗಳು ದಾಖಲಾಗಿದ್ದು, ಬಳ್ಳಾರಿ ಜೈಲಿಗೆ ಕಳುಹಿಸುವಂತೆ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
ಕಳೆದ ಜನವರಿಯಲ್ಲಿ ಕೆ.ಆರ್ ಪುರದ ಟಿನ್ ಫ್ಯಾಕ್ಟರಿ ಬಳಿಯ ನಿರ್ವಾಣ ಇಂಟರ್‌ನ್ಯಾಷನಲ್ ಸ್ಪಾ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಥೈಲ್ಯಾಂಡ್ ಮಹಿಳೆಯರು ಸೇರಿ ಒಟ್ಟು 44 ಮಹಿಳೆಯರನ್ನು ರಕ್ಷಣೆ ಮಾಡಲಾಗಿತ್ತು. ದಾಳಿಯ ನಂತರ, ಈ ಸ್ಪಾವನ್ನು ತಕ್ಷಣವೇ ಬಂದ್ ಮಾಡಲಾಗಿತ್ತು.
ಇನ್ನು ಅನಿಲ್ ರೆಡ್ಡಿ, ಬೆಂಗಳೂರು ಸೇರಿ ವಿವಿಧ ರಾಜ್ಯಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದನು. ಯುವತಿಯರನ್ನು ಕೆಲಸದ ನೆಪದಲ್ಲಿ ಬೆಂಗಳೂರಿಗೆ ಕರೆಸಿ, ವೇಶ್ಯಾವಾಟಿಕೆಗೆ ತಳ್ಳುತ್ತಿದ್ದನು. ಈತ ವಿರುದ್ಧ ರೇಪ್ ಸೇರಿ ಹಲವು ಗಂಭೀರ ಪ್ರಕರಣಗಳು ದಾಖಲಾದ ಕಾರಣ, ಮಹದೇವಪುರ ಪೊಲೀಸರು ಗೂಂಡಾ ಕಾಯ್ದೆ ವರದಿ ತಯಾರಿಸಿದ್ದರು. ಈ ವರದಿ ಆಧರಿಸಿ ಪೊಲೀಸ್ ಆಯುಕ್ತರು ಗೂಂಡಾ ಕಾಯ್ದೆ ಜಾರಿ ಮಾಡಿ, ರೆಡ್ಡಿಯನ್ನು ಬಂಧಿಸಿದ್ದಾರೆ.ಇದನ್ನು ಓದಿ –ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
ಸಾರ್ವಜನಿಕರ ಎಚ್ಚರಿಕೆ:
ಹೀಗೆ ನಡೆಯುವ ದಂಧೆಗಳಲ್ಲಿ ಯಾರಾದರೂ ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಅಂತಹ ಅಪರಾಧಗಳನ್ನು ತಡೆಯಲು ಎಲ್ಲರೂ ಜಾಗರೂಕರಾಗಿರಬೇಕು.
More Stories
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!