ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ನಿರ್ಧಾರ – ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

Team Newsnap
1 Min Read
Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇವಲ ತೋರಿಕೆಗೆ ಲಿಂಗಾಯತ ಸಮುದಾಯದ ಮಠಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ.

ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ವಿಧಾನಸಭೆ ಚುನಾವಣೆಗಿಂತ ಈ ಬಾರಿ ಬಿಜೆಪಿ ಹೆಚ್ಚು ಮತ ಗಳಿಸಲಿದೆ. ಮಾಜಿ ಸಿ.ಎಂ. ಜಗದೀಶ್ ಶೆಟ್ಟರ್ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಾಗುವುದು.

ಇದು ಬಿಜೆಪಿಗೆ ಪ್ಲಸ್ ಆಗಲಿದೆ. ಶೆಟ್ಟರ್ ಮತ್ತು ಸವದಿ ವಿರುದ್ಧ ಮತದಾರರು ಇದ್ದಾರೆ. ಅಧಿಕಾರ ಅನುಭವಿಸಿ ಕಾಂಗ್ರೆಸ್ ಸೇರಿದ್ದಾರೆ. ಇದನ್ನು ಜನ ಒಪ್ಪಿಕೊಳ್ಳುವುದಿಲ್ಲ ಎಂದರು.

ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದು ಊಹಿಸಿರಲಿಲ್ಲ. ಹೈಕಮಾಂಡ್ ನಿರ್ಧರಿಸಿತು. ಅದರಂತೆ ಈಗಲೂ ಮುಖ್ಯಮಂತ್ರಿ ಯಾರಾಗಬೇಕೆಂದು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ. ಎಲ್ಲವನ್ನೂ ದೆಹಲಿಯ ನಾಯಕರು ಗಮನಿಸುತ್ತಿದ್ದಾರೆ ಎಂದರು.

ಲಂಚ ಪ್ರಕರಣದ ಆರೋಪಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಚನ್ನಗಿರಿಯಲ್ಲಿ ಬಂಡಾಯ ಅಭ್ಯರ್ಥಿ ಪುತ್ರನ ಪರ ಪ್ರಚಾರ ನಡೆಸುತ್ತಿರುವ ಬಗ್ಗೆ ಹೈಕಮಾಂಡ್ ಗಮನಿಸುತ್ತಿದ್ದು, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.ಇದನ್ನು ಓದಿ –ಮುಸ್ಲಿಮರ ಓಲೈಕೆ ಬಿಡಿ : ಗೃಹ ಸಚಿವ ಅಮಿತ್ ಶಾ

ಲಿಂಗಾಯತರ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಯಾರೂ ತಿರುಚಿಲ್ಲ. ಅವರು ಏನು ಹೇಳಿದ್ದಾರೆ ಎಂಬುದಕ್ಕೆ ವಿಡಿಯೋ ಸಾಕ್ಷಿಯಿದೆ. ಅವರು ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡಿದ್ದಾರೆ. ಜನರು ದಡ್ಡರಲ್ಲ ಎಂದರು.

Share This Article
Leave a comment