ಚಿತ್ರದುರ್ಗದ ಮುರುಘಾ ಮಠಕ್ಕೆ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿದ ಹೈಕೋರ್ಟ್

Team Newsnap
1 Min Read
Transfer of power in Muruga Math: Power from Shivamurthy Swami to retired justice ಮುರುಘಾಮಠದ ಅಧಿಕಾರ ಹಸ್ತಾಂತರ : ಶಿವಮೂರ್ತಿ ಸ್ವಾಮಿಯಿಂದ ನಿವೃತ್ತ ನ್ಯಾಯಮೂರ್ತಿಗೆ ಅಧಿಕಾರ

ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠಕ್ಕೆ ಚಿತ್ರದುರ್ಗದ ಜಿಲ್ಲಾ ಪ್ರಧಾನ ನ್ಯಾಯಾಧೀಶರನ್ನು ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಿದ್ದ ಕರ್ನಾಟಕ ಸರ್ಕಾರದ ಕ್ರಮವನ್ನು ರದ್ದು ಪಡಿಸಿದ್ದ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಚ್. ಏಕನಾಥ್ ಎಂಬುವರು ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಳೆ ಮತ್ತು ನ್ಯಾಯಮೂರ್ತಿ ಎಂ. ಜೆ. ಎಸ್. ಕಮಲ್ ಅವರಿದ್ದ ವಿಭಾಗೀಯ ಪೀಠ ತಾತ್ಕಾಲಿಕ ಆಡಳಿತಾಧಿಕಾರಿ ನೇಮಿಸಿ ಆದೇಶಿಸಿದೆ.

ಮಠದ ಆಡಳಿತಾಧಿಕಾರಿಯನ್ನಾಗಿ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶರು ಮಂಗಳವಾರ ಬೆಳಗ್ಗೆ ಅಧಿಕಾರ ಸ್ವೀರಿಸಲು ನ್ಯಾಯಪೀಠ ಸೂಚನೆ ನೀಡಿದೆ. ತಾತ್ಕಾಲಿಕವಾಗಿ ನೇಮಕಗೊಂಡಿರುವ ಆಡಳಿತಾಧಿಕಾರಿಗಳು (ಜಿಲ್ಲಾ ನ್ಯಾಯಾಧೀಶರು) ಮುರುಘಾ ಮಠ ಮತ್ತು ಮಠದ ಅಧೀನದ ಶಿಕ್ಷಣ ಸಂಸ್ಥೆಗಳ ದಿನ ನಿತ್ಯದ ವ್ಯವಹಾರಗಳನ್ನು ನೋಡಿಕೊಳ್ಳಬೇಕು. ಆದರೆ, ಯಾವುದೇ ನೀತಿ, ನಿರೂಪಣೆಗಳನ್ನು ಮಾಡಲು ಮುಂದಾಗಬಾರದು. ಇದಕ್ಕೆ ಜಿಲ್ಲಾಧಿಕಾರಿಗಳು ಅಗತ್ಯವಿರುವ ಸಹಕಾರವನ್ನು ನೀಡಬೇಕು ಎಂದು ನ್ಯಾಯಪೀಠ ನಿರ್ದೇಶನ ನೀಡಿದೆ.

ವಿಚಾರಣೆಯನ್ನು ಜುಲೈ 18ಕ್ಕೆ ಮುಂದೂಡಿದೆ.

Share This Article
Leave a comment