ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

Team Newsnap
1 Min Read

ಪದವಿ ಪೂರ್ವ ದ್ವಿತೀಯ ವರ್ಷದ ವಿದ್ಯಾರ್ಥಿಗಳ 2020-21ನೇ ಸಾಲಿನ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವವರೆಗೂ ಫಲಿತಾಂಶ ಪ್ರಕಟಿಸಬಾರದು ಎಂದು ಹೇಳಿರುವ ಹೈಕೋರ್ಟ್ ವಿಭಾಗೀಯ ಪೀಠದಿಂದ ಈ ಬಗ್ಗೆ ಮಧ್ಯಂತರ ಆದೇಶ ಹೊರಡಿಸಲಾಗಿದೆ.

12 ಜನ ತಜ್ಞರ ಸಮಿತಿ ರಚಿಸಿರುವುದಾಗಿ ಸರ್ಕಾರ ಹೇಳಿಕೆ ನೀಡಿತ್ತು. ಈ ಕಾರಣದಿಂದ ಈಗಲೇ ಫಲಿತಾಂಶ ಪ್ರಕಟ ಮಾಡದಂತೆ ಕೋರ್ಟ್ ಹೇಳಿದೆ.

76 ಸಾವಿರ ವಿದ್ಯಾರ್ಥಿಗಳು ‌ರಿಪೀಟಸ್೯ :

5.92 ಲಕ್ಷ ಪಿಯು ವಿದ್ಯಾರ್ಥಿಗಳ ಫಲಿತಾಂಶ ಬರಬೇಕಾಗಿದೆ. 76 ಸಾವಿರ ರಿಪೀಟರ್ಸ್ ಫಲಿತಾಂಶಕ್ಕೆ ಕಾಯುತ್ತಿದ್ದಾರೆ. ಹೀಗಾಗಿ ಸರ್ಕಾರ ಸರಿಯಾದ ತೀರ್ಮಾನ ಕೈಗೊಳ್ಳುವವರೆಗೆ ಫಲಿತಾಂಶ ಪ್ರಕಟ ಮಾಡಬಾರದು ಮತ್ತು 15 ದಿನದೊಳಗೆ ತಜ್ಞರ ಸಮಿತಿ ಸಲಹೆ ಆಧರಿಸಿ ಸರ್ಕಾರ ತೀರ್ಮಾನಿಸಲಿದೆ ಎಂದು ಹೇಳಿದೆ.

ಜಂಟಿ ನಿರ್ದೇಶಕ ( ಪರೀಕ್ಷೆ) ಈ ಬಗ್ಗೆ ಮಾಹಿತಿ ಲಭ್ಯವಾಗಿದೆ. ರಿಪೀಟರ್ಸ್, ಸಾಮಾನ್ಯ ವಿದ್ಯಾರ್ಥಿಗಳಿಗೆ ತಾರತಮ್ಯ ಬೇಡ. ಖಾಸಗಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಅನಿವಾರ್ಯ ಎಂದು ನ್ಯಾ.ಬಿ.ವಿ.ನಾಗರತ್ನ ನೇತೃತ್ವದ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಬಳಿಕ, ವಿಚಾರಣೆಯನ್ನು ಹೈಕೋರ್ಟ್ ಜುಲೈ 5ಕ್ಕೆ ಮುಂದೂಡಿದೆ.

Share This Article
Leave a comment