ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ

Team Newsnap
2 Min Read
Idga Maidan- Chamarajpet Bandh in Bengaluru July 12 to condemn BBMP ಈದ್ಗಾ ಮೈದಾನ- BBMP ಹೇಳಿಕೆ ಖಂಡಿಸಿ ಜು.12ಕ್ಕೆ ಬೆಂಗಳೂರಿನ ಚಾಮರಾಜಪೇಟೆ ಬಂದ್‌

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ.

ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ. ವಿವಾದಿತ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು.

ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು.
ಬಕ್ರೀದ್ ಮತ್ತು ರಂಜಾನ್ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ನಿನ್ನೆ ನೀಡಿದ್ದ ಆದೇಶ ಮಾರ್ಪಡಿಸಿ ಹೈಕೋರ್ಟ್ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.

ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ತೀರ್ಪು ಸ್ವಾಗತಾರ್ಹ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ

ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಹಿಂದೂಗಳ ಧಾರ್ಮಿಕ ಆಚರಣೆ ಸ್ವಾತಂತ್ರ್ಯ ಯಾರೊಬ್ಬರ ಬಳಿ ಕೇಳಿ ಪಡೆಯುವ ಭಿಕ್ಷೆ ಅಲ್ಲ ಅದು ಜನ್ಮ ಸಿದ್ದ ಹಕ್ಕು ಅನ್ನೋದನ್ನು ಇಂದಿನ ತೀರ್ಪು ಎತ್ತಿ ಹಿಡಿದಿದೆ. ಕಂದಾಯ ಇಲಾಖೆಗೆ ಸೇರಿದ್ದ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸಮಿತಿಗಳಿಗೆ ಅನುಮತಿ ನೀಡಲು ನಾನು ಈಗಾಗಲೇ ಘನ ಸರಕಾರಕ್ಕೆ ಪತ್ರ ಬರೆದಿದ್ದು ಅದು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕೂಡಾ ಆಗಿತ್ತು . ಇಂದಿನ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಆ ನಿಟ್ಟಿನಲ್ಲೇ ಇದೆ ಎಂದಿದ್ದಾರೆ.

ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿನ್ನೆ ಹೈಕೋರ್ಟ್ ಏಕ ಸದಸ್ಯ ಪೀಠ ನೀಡಿದ್ದ ತೀರ್ಪಿನಿಂದ ನಿರಾಶರಾಗಿದ್ದ ನಮಗೆ ಇಂದಿನ ತೀರ್ಪು ಮತ್ತೊಮ್ಮೆ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದೆ ಮತ್ತು ಸಂತಸ ತಂದಿದೆ. ಗಣೇಶೋತ್ಸವ ಆಚರಣೆಯ ಹಿಂದಿನ ಉದ್ದೇಶ ಸಮಾಜದ ಏಕತೆ . ಇದನ್ನು ಅರ್ಥ ಮಾಡಿಕೊಳ್ಳದ ಮತಾಂಧ ಶಕ್ತಿಗಳಿಗೆ ದೇಶ ಭಕ್ತಿಯ ಸದಾಚಾರ ,ಸದ್ಬುದ್ಧಿ ಕೊಡಲೆಂದು ವಿಘ್ನ ವಿನಾಶಕನಲ್ಲಿ ಪ್ರಾರ್ಥಿಸೋಣ ಎಂದು ತಿಳಿಸಿದ್ದಾರೆ.

Share This Article
Leave a comment