ಬೆಂಗಳೂರು : ಹೈಕೋರ್ಟ್ ವಕೀಲರಾದ ಚೈತ್ರಾ ಗೌಡ ಅವರದ್ದು ಕೊಲೆಯಲ್ಲ, ಆತ್ಮಹತ್ಯೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳು ತಿಳಿಸಿವೆ.
ಚೈತ್ರಾ ಗೌಡ ಮೇ 11ರಂದು ಸಂಜಯನಗರದ ಅಣ್ಣಯ್ಯಪ್ಪ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು.
ಆದರೆ ಚೈತ್ರಾ ಕುಟುಂಬಸ್ಥರು ಕೊಲೆ ಎಂದು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು ,ದೂರಿನ ಅನ್ವಯ ಕೆಎಎಸ್ ಅಧಿಕಾರಿ ಶಿವಕುಮಾರ್‌ನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪತಿ ಶಿವಕುಮಾರ್ ವಿಚಾರಣೆ ವೇಳೆ , ಪತ್ನಿಯೊಂದಿಗೆ ಯಾವುದೇ ವೈಷಮ್ಯ ಇರಲಿಲ್ಲ. ಹಣಕಾಸಿನ ತೊಂದರೆಯೂ ಇರಲಿಲ್ಲ .ಆದರೆ ಚೈತ್ರಾ ಇತ್ತೀಚೆಗೆ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಿದ್ದಾರೆ.
ಚೈತ್ರಾ , ಕುಟುಂಬಸ್ಥರೊಂದಿಗೆ ಮಾತನಾಡುವಾಗ ಮೂರು ತಿಂಗಳ ಹಿಂದೆಯೇ ಸಾಯೋ ಮಾತುಗಳನ್ನಾಡಿದ್ದರು, ಆಗ ಕುಟುಂಬಸ್ಥರೇ ಧೈರ್ಯತುಂಬಿದ್ದಾರೆ.
ಸಂಜಯ್ ನಗರದ ಪೊಲೀಸರಿಗೆ, ಮನೆಯಲ್ಲಿ ಸಿಕ್ಕ ಡೆತ್ ನೋಟ್ ಚೈತ್ರಾ ಅವರೇ ಬರೆದಿದ್ದಾರೆ ಎಂದು ದೃಡವಾಗಿದೆ.16ನೇ ವಯಸ್ಸಿನ ಭಾರತೀಯ ಬಾಲಕಿ ಮೌಂಟ್ ಎವರೆಸ್ಟ್ ಶಿಖರ ಏರಿ ಸಾಧನೆ
ಮರಣೋತ್ತರ ಪರೀಕ್ಷೆಯಲ್ಲೂ ಆಕೆ ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದ್ದು , ಸಂಜಯ್‌ನಗರ ಪೊಲೀಸರು ತನಿಖೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದಾರೆ.
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ಚುನಾವಣೆಗೂ ಮುನ್ನ ಕೇಜ್ರಿವಾಲ್ ಸಂಕಷ್ಟ – ಮದ್ಯ ನೀತಿ ಹಗರಣ ಪ್ರಕರಣದಲ್ಲಿ ಇಡಿಗೆ ರಾಜ್ಯಪಾಲರ ಅನುಮತಿ